ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ !

 

ಬೆಂಗಳೂರು, ಏ.21- ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ದವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕೆ ಹೇಳಿಕೆ ನೀಡಿರುವ ಅವರು, ಎಸ್ ಸಿಪಿ/ಟಿಎಸ್ ಪಿ ಕಾಯ್ದೆಯ ಪ್ರಕಾರ ಒಟ್ಟು ಬಜೆಟ್ ನ ಶೇಕಡಾ 24.1ರಷ್ಟು ಭಾಗವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಷ್ಟೇ ಬಳಸಬೇಕಿದೆ. ಆ ವರ್ಷ ಉಳಿಕೆಯಾದರೆ ಅದನ್ನು ನಂತರದ ವರ್ಷ ಖರ್ಚು ಮಾಡಬೇಕು. ನಿಗದಿತ ಪ್ರಮಾಣದಲ್ಲಿ ನಿಗದಿತ ಉದ್ದೇಶಕ್ಕೆ ಖರ್ಚು ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ದ ಕಾನೂನುಕ್ರಮ ಕೈಗೊಳ್ಳಲು ಕೂಡಾ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ.

2021-22ರ ರಾಜ್ಯ ಬಜೆಟ್ ನಲ್ಲಿ ಎಸ್ ಸಿಪಿ/ಟಿಎಸ್ ಪಿ ಕಾಯ್ದೆಯನ್ವಯ ಯೋಜನಾ ವೆಚ್ಚದ ಶೇಕಡಾ 24.1ರಷ್ಟು ಅಂದರೆ 26,695.64 ಕೋಟಿ ರೂಪಾಯಿಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಮೀಸಲಿಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಕಾಯ್ದೆಯನ್ನು ಉಲ್ಲಂಘಿಸಿ ಒಟ್ಟು ಹಣದಲ್ಲಿ ರೂ.7885.32 ಕೋಟಿಗಳನ್ನು ಮೂಲಸೌಕರ್ಯದ ಯೋಜನೆಗಳಿಗೆ ವ್ಯಯ ಮಾಡಿದೆ. ಇದು ಸಂಪೂರ್ಣವಾಗಿ ಕಾನೂನು ವಿರೋಧಿ ನಡೆಯಾಗಿದೆ, ಇದಕ್ಕೆ ಕಾರಣರಾದವರ ವಿರುದ್ದ ಎಸ್ ಸಿಪಿ/ಟಿಎಸ್ ಪಿ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಯವರ ಒತ್ತಾಯಿಸಿದ್ದಾರೆ.

2018-21ರ ನಾಲ್ಕು ವರ್ಷಗಳ ಅವಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣದಲ್ಲಿ ರೂ.7885.32 ಕೋಟಿ ರೂಪಾಯಿಗಳನ್ನು ನೀರಾವರಿ, ನಗರಾಭಿವೃದ್ದಿ ಮತ್ತು ಗ್ರಾ ಮೀಣಾಭಿವೃದ್ದಿ ಇಲಾಖೆಗಳ ಯೋಜನೆಗಳಿಗೆ ಖರ್ಚು ಮಾಡಲಾಗಿದೆ. ಈ ಮೂಲಕ ಎಸ್‍ಸಿ/ಎಸ್ಟಿ ಯೋಜನೆಗಳಿಗೆ ಹಣ ಕಡಿತ ಮಾಡಲಾಗಿದೆ.

ಎಸ್ ಸಿಪಿ/ಟಿಎಸ್‍ಪಿ ಹಣದ ಸ್ವಲ್ಪ ಭಾಗವನ್ನು ಸಾಮಾನ್ಯ ಮೂಲಸೌಕರ್ಯಗಳಿಗೆ ಬಳಸಲು ಕಾಯ್ದೆಯಲ್ಲಿ ಅವಕಾಶವಿದ್ದರೂ, ಇಷ್ಟೊಂದು ಪ್ರಮಾಣದ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯ ನೇರ ಫಲಾನುಭವಿಗಳಲ್ಲದ ಯೋಜನೆಗಳಿಗೆ ಬಳಸುವುದು ದಲಿತರಿಗೆ ಬಗೆಯುವ ದ್ರೋಹ ಮತ್ತು ಕಾನೂನಿನ ಉಲ್ಲಂಘನೆ ಎಂದು ಕಿಡಿಕಾರಿದ್ದಾರೆ.

2012-13 ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗಾಗಿ ಕೇವಲ ರೂ.7,200 ಕೋಟಿಗಳನ್ನು ಮೀಸಲಿರಿಸಲಾಗಿತ್ತು. ಈ ಮೊತ್ತವು 2014-15 ರ ವೇಳೆಗೆ ರೂ.15834 ಕೋಟಿಗಳಿಗೆ ಏರಿಕೆಯಾಯಿತು. 2018 ರ ಫೆಬ್ರವರಿಯಲ್ಲಿ ನಾನು ಬಜೆಟ್ ಮಂಡಿಸಿದಾಗ ರೂ.29691.5 ಕೋಟಿಗಳನ್ನು ಈ ಯೋಜನೆಗೆ ಮೀಸಲಿರಿಸಿದ್ದೆ.

ಕಳೆದ 3 ವರ್ಷಗಳಿಂದ ಬಿಜೆಪಿ ಸರ್ಕಾರ ಈ ವರ್ಗಗಳಿಗೆ ಖರ್ಚು ಮಾಡುವ ಅನುದಾನವನ್ನು ಒಂದೇ ಸಮನೆ ಕಡಿಮೆ ಮಾಡುತ್ತಿದೆ. ಬಜೆಟ್ ಗಾತ್ರ ಮಾತ್ರ ದೊಡ್ಡದಾಗುತ್ತಿದೆಯೇ ಹೊರತು, ಜನರ ಕಲ್ಯಾಣಕ್ಕಾಗಿ ಖರ್ಚು ಮಾಡುವ ಅನುದಾನ ಕಡಿಮೆಯಾಗುತ್ತಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

2011ನೇ ನೇಮಕಾತಿ ಕುರಿತು ಸಲ್ಲಿಕೆಯಾಗಿದ್ದ ಪಿಐಎಲ್‌ ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Thu Apr 21 , 2022
    ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2011ನೇ ನೇಮಕಾತಿ ಕುರಿತು ಸಲ್ಲಿಕೆಯಾಗಿದ್ದ ಪಿಐಎಲ್‌ ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆ ಬಗ್ಗೆ ಕೋರ್ಟ್‌ ಮೊರೆ ಹೋಗಲಾಗಿತ್ತು. ಸಾಮಾಜಿಕ ಕಾರ್ಯಕರ್ತ ಆರೀಫ್ ಜಮಾಲ್ 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ಅವರಿಗೆ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ […]

Advertisement

Wordpress Social Share Plugin powered by Ultimatelysocial