ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ- ಟೀಮ್ ಎಂದು ಹೇಳಿದ್ದರು.

ಬೆಂಗಳೂರು, ಏ.20: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ ಅವರ ಸಾಮಾಜಿಕ ಜಾಲತಾಣದ ವಾರ್ ಮುಂದುವರಿದಿದೆ. ಪರಸ್ಪರ ಮಾತಿನ ಚಾಟಿಗಳನ್ನು ನೀಡುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ- ಟೀಮ್ ಎಂದು ಹೇಳಿದ್ದರು.

ಇದಕ್ಕೆ ಕೆಂಡಾಮಂಡಲ ಆಗಿದ್ದ ಕುಮಾರಸ್ವಾಮಿ ಅವರು ‘ಹೆಸರಲ್ಲಿ ರಾಮ! ಉಂಡಮನೆಗೆ ಪಂಗನಾಮ’ ಎಂದು ಸಿದ್ದರಾಮಯ್ಯ ಅವರ ಕಾಲೆಳೆದಿದ್ದರು.

ಅದಕ್ಕೆ ಮತ್ತೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು, ‘ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಎಚ್‌ಡಿ. ದೇವೇಗೌಡ ಅವರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ದ ಇದ್ದೀರಾ? ಎಚ್‌.ಡಿ. ಕುಮಾರಸ್ವಾಮಿ ಅವರೇ’ ಎಂದು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜು ಕಾರುತ್ತಿರುವ ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ. ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ-ಟೀಮ್’ ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ.

ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ, ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ.

ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ ಕುಮಾರಸ್ವಾಮಿ ಅವರೇ ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು – ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೈಲು ದುರಂತದಲ್ಲಿ ಜನ - ಜಾನುವಾರುಗಳ ಸಾವು ಸಂಭವಿಸುತ್ತದೆ.

Wed Apr 20 , 2022
ದೇಶದಲ್ಲಿ ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ರೈಲು ದುರಂತದಲ್ಲಿ ಜನ – ಜಾನುವಾರುಗಳ ಸಾವು ಸಂಭವಿಸುತ್ತದೆ. ಇಂತಹದೊಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಾಳಗುಪ್ಪದಿಂದ ಶಿವಮೊಗ್ಗಕ್ಕೆ ಪ್ಯಾಸೆಂಜರ್ ರೈಲು ಬರುತ್ತಿದ್ದ ವೇಳೆ ಕಾಶಿಪುರ ಗೇಟ್ ಡಳಿ ಹಳಿಗಳ ಮೇಲೆ ಎಮ್ಮೆಗಳ ಹಿಂಡು ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿದ್ದಾರೆ. ಕೂಡಲೇ ಅವರು ರೈಲು ನಿಲ್ಲಿಸಿದ್ದು ಎಮ್ಮೆಗಳು ಹಳಿಗಳ ಮೇಲಿನಿಂದ ಇಳಿದು ಹೋದ ನಂತರ ರೈಲು ಚಾಲನೆ ಮಾಡಿಕೊಂಡು […]

Advertisement

Wordpress Social Share Plugin powered by Ultimatelysocial