ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ!ಸಿದ್ದರಾಮಯ್ಯ

 

ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹಿಂದಿ, ಇಂಗ್ಲೀಷ್, ತಮಿಳು,‌ ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಗುಡುಗಿದ್ದಾರೆ.

ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.

ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ. ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.

ತಮಿಳುನಾಡು, ಕೇರಳ,‌ ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕ ಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ಬ್ಯಾಂಕ್‍ಗಳಿಗೆ ಎಟಿಎಂಗಳ ಮೂಲಕ ಕಾರ್ಡ್‍ರಹಿತ ನಗದು !

Fri Apr 8 , 2022
  ಎಲ್ಲಾ ಬ್ಯಾಂಕ್‍ಗಳಿಗೆ ಎಟಿಎಂಗಳ ಮೂಲಕ ಕಾರ್ಡ್‍ರಹಿತ ನಗದು ವಿದ್‍ಡ್ರಾವಲ್ ಮಾಡುವ ಸೌಲಭ್ಯವನ್ನು ಗ್ರಾಹಕರಿಗೆ ಕಲ್ಪಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಅನುಮತಿಸಿದೆ. ಪ್ರಸಕ್ತ ಇಂತಹ ಒಂದು ವ್ಯವಸ್ಥೆಯನ್ನು ದೇಶದಲ್ಲಿ ಕೆಲವೇ ಕೆಲವು ಬ್ಯಾಂಕ್‍ಗಳು ತಮ್ಮ ಗ್ರಾಹಕರಿಗೆ, ತಮ್ಮ ಎಟಿಎಂಗಳ ಮೂಲಕ ಮಾತ್ರ ಅನುಮತಿಸುತ್ತಿವೆ. “ಇದೀಗ ಈ ವ್ಯವಸ್ಥೆಯನ್ನು ಎಲ್ಲಾ ಬ್ಯಾಂಕ್‍ಗಳ ಎಲ್ಲಾ ಎಟಿಎಂ ನೆಟ್‍ವರ್ಕ್‍ಗಳಲ್ಲೂ ಯುಪಿಐ ಮೂಲಕ ಒದಗಿಸಲು ಪ್ರಸ್ತಾಪಿಸಲಾಗಿದೆ. ಈ ಮೂಲಕ ಭೌತಿಕ ಕಾರ್ಡ್ ಅವಶ್ಯಕತೆಯಿಲ್ಲದೇ ಇರುವುದಿಂದ […]

Advertisement

Wordpress Social Share Plugin powered by Ultimatelysocial