ಸಿಂಪಲ್ ಸುನಿ ನೆಕ್ಸ್ಟ್ ಚಿತ್ರಕ್ಕೆ ದೊಡ್ಮನೆ ಹುಡುಗ ಎಂಟ್ರಿ

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ. ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡೋಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ಬಿರಿಯಾನಿ ನಮ್ದು.. ಕ್ರಾಂತಿ ನಿಮ್ದು"

Thu Jan 5 , 2023
2022 ಕನ್ನಡ ಸಿನಿಮಾಗಳು ಅಬ್ಬರಿ ಬೊಬ್ಬಿರಿದಿವೆ. ಇನ್ನು 2023ರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಹೊಸ ವರ್ಷದ ಮೊದಲ ತಿಂಗಳಲ್ಲಿಯೇ ಸೂಪರ್‌ಸ್ಟಾರ್ ಸಿನಿಮಾ ರಿಲೀಸ್ ಆಗುತ್ತಿದ್ದು ಬಾಕ್ಸಾಫೀಸ್‌ ಕಲೆಕ್ಷನ್ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.ಬಹಳ ದಿನಗಳ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ಅಭಿಮಾನಿಗಳೂ ಕೂಡ ಸಿನಿಮಾ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ.ಬಿಡುಗಡೆಗೆ ಇನ್ನೂ ಮೂರು-ನಾಲ್ಕು ವಾರ ಇರುವಾಗಲೇ ಡಿ ಬಾಸ್ ಫ್ಯಾನ್ಸ್ ಸೆಲೆಬ್ರೆಷನ್ ಶುರುವಾಗಿದೆ.’ಕ್ರಾಂತಿ’ ಇದೇ ಜನವರಿ 26ಕ್ಕೆ ರಾಜ್ಯಾದ್ಯಾಂತ […]

Advertisement

Wordpress Social Share Plugin powered by Ultimatelysocial