ಸಿಂಪಲ್ ಸ್ಟಾರ್ ಮತ್ತು ರೋರಿಂಗ್ ಸ್ಟಾರ್ ಮುಖಾಮುಖಿ..!!

 

ರಕ್ಷಿತ್‌ ಶೆಟ್ಟಿ ಅಭಿನಯದ 777 ಚಾರ್ಲಿ ರಿಲೀಸ್ ಡೇಟ್ ಆನೌನ್ಸ್ ಮಾಡಿದೆ ಇದರ ಬೆನ್ನಲ್ಲೆ ಈಗ ಮದಗಜ ಕೂಡ ಅಬ್ಬರಿಸೋಕೆ ರೆಡಯಾಗುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಟೀಸರ್ ಅನ್ನು ಕನ್ನಡದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಲಾಗಿತ್ತು ಇದೀಗ ತೆಲುಗು ಹಾಗೂ ತಮಿಳಿನಲ್ಲಿ ಈ ಟೀಸರ್ ರಿಲೀಸ್ ಮಾಡಲಿದ್ದಾರೆ ಇಗಾಗಲೇ ಅಬ್ಬರ ಪ್ರಚಾರ ಕಾರ್ಯ ಕೂಡ ಆರಂಭವಾಗಿದೆ.ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಜಗಪತಿ ಬಾಬು, ದೇವಯಾನಿ, ಶಿವರಾಜ್ ಕೆ.ಆರ್. ಪೇಟೆ, ಚಿಕ್ಕಣ್ಣ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಈ ಚಿತ್ರ ರಿಲೀಸ್ ಆಗಲಿದೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada
Please follow and like us:

Leave a Reply

Your email address will not be published. Required fields are marked *

Next Post

ದರ್ಶನ್ ಗೆಳೆತನದ ಬಗ್ಗೆ ಸುದೀಪ್ ಮಾತು..!!

Thu Oct 28 , 2021
ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ದಿಕ್ಕುಗಳಂತಾಗಿಬಿಟ್ಟಿದ್ದರು. ಇನ್ನೆಂದೂ ಜೊತೆ ಸೇರಲಾರರು ಎಂದೇ ಎಲ್ಲರೂ ಭಾವಿಸಿದ್ರು. ಆದರೆ ಈ ಶೀಥಲ ಸಮರಕ್ಕೆ ಅಂತ್ಯ ಹಾಡುವ ಬಹಿರಂಗ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ”ದರ್ಶನ್ ಸದಾ ನನ್ನ ಗೆಳೆಯನೇ” ಎಂದಿರುವ ಸುದೀಪ್ ಆ ಮೂಲಕ ತಾವೊಬ್ಬ ವಿಶಾಲ ಹೃದಯಿ ವ್ಯಕ್ತಿ ಎಂಬುದನ್ನೂ ಜಾಹೀರು ಮಾಡಿದ್ದಾರೆ.ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್‌ಗೆ ನಿರೂಪಕರು ದರ್ಶನ್ ಹಾಗೂ ಸುದೀಪ್ ಒಟ್ಟಿಗಿರುವ ಚಿತ್ರವನ್ನು ತೋರಿಸಿ […]

Advertisement

Wordpress Social Share Plugin powered by Ultimatelysocial