ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಭಾವನಿಂದಲೇ ಅತ್ಯಾಚಾರ

ಶಿವಮೊಗ್ಗ: ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಅಕ್ಕನ ಗಂಡನ ವಿರುದ್ಧ ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಎಸ್‌ಎಸ್‌ಎಲ್ಸಿ ಫೇಲಾಗಿದ್ದ ಬಾಲಕಿ ಅಕ್ಕನ ಮನೆಗೆ ಬಂದಿದ್ದಳು.ಆಕೆಯ ಮೇಲೆ ಭಾವ ಅತ್ಯಾಚಾರ ಎಸಗಿದ್ದು ಗರ್ಭಿಣಿಯಾಗಿದ್ದಾಳೆ. 7 ನೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಬಾಲಕಿಯನ್ನು ಸಖಿ ಕೇಂದ್ರಕ್ಕೆ ಬಿಡಲಾಗಿದ್ದು, ಮಗುವನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ. ಮಗು ಮೃತಪಟ್ಟಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರವಿ ಚನ್ನಣ್ಣವರ್​ ವಿರುದ್ಧ ಭ್ರಷ್ಟಾಚಾರ ಆರೋಪ; ತಾಯಿ-ತಂದೆ ಹೇಳಿದ್ದೇನು?

Sat Feb 5 , 2022
  ಬೆಂಗಳೂರು: ಕಳೆದ ಕೆಲವು ದಿನಗಳಿಂದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಇದೀಗ ಅವರ ತಾಯಿ-ತಂದೆ ಕೂಡ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ.ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್ ಅಕ್ರಮವಾಗಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆ ಎಂಬುದಾಗಿ ಕೆಲವರು ಆರೋಪಿಸಿದ್ದು, ಆ ಬಗ್ಗೆ ಪರ-ವಿರೋಧ ಪ್ರತಿಕ್ರಿಯೆಗಳು ಕೂಡ ಕೇಳಿ ಬರುತ್ತಿವೆ. ಈ ಮಧ್ಯೆ ಆರೋಪದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿರುವ ರವಿ […]

Advertisement

Wordpress Social Share Plugin powered by Ultimatelysocial