ಸುಕೃತ ನಾಗ್-ಶೈನ್ ಶೆಟ್ಟಿ ಮದುವೆ ಫಿಕ್ಸ್?

ಕಿರುತೆರೆ ಹಾಗೂ ಬೆಳ್ಳಿ ತೆರೆಯ ಬಹಳಷ್ಟು ಸೆಲೆಬ್ರಿಟಿಗಳು  ಮದುವೆ   ಯೋಚನೆ ಮಾಡುತ್ತಿದ್ದಾರೆ. ಬಾಲಿವುಡ್​ನಿಂದ  ಸೌತ್ ಇಂಡಸ್ಟ್ರಿ  ತನಕ ಸಿನಿಮಾ ಹಾಗೂ ಕಿರುತೆರೆಯ ಬಹಜಳಷ್ಟು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವಾಗ ಕನ್ನಡ ಕಿರುತೆರೆ ಜೋಡಿಯೊಂದು ಸಪ್ತಪದಿ ತುಳಿಯಲು ಸಿದ್ಧವಾಗಿದೆ ಎನ್ನುವ ಸುದ್ದಿ ಕೇಳಿ ಬಂದಿದೆ. ಕನ್ನಡ ಬಿಗ್ ಬಾಸ್ ಮೂಲಕ ಖ್ಯಾತಿ ಗಳಿಸಿದ ಶೈನ್ ಶೆಟ್ಟಿ ಯುವತಿಯರ ಹಾಟ್ ಫೇವರೇಟ್ ಎಂದು ಬೇರೆ ಹೇಳುವ ಅಗತ್ಯವಿಲ್ಲ. ಎಲ್ಲಾ ಕಡೆ ಫೇಮಸ್ ಆಗಿರೋ ಅವರ ಹೆಸರು ಕಿರುತೆರೆಯಲ್ಲೀಗ ಫೇಮಸ್. ಶೈನ್ ಶೆಟ್ಟಿ ಬಿಗ್ ಬಾಸ್ ನಲ್ಲೂ ಕೂಡ ಭಾಗವಹಿಸಿ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್​​ನ ಶೈನ್ ಶೆಟ್ಟಿ ಅವರು ರಿಯಾಲಿಟಿ ಶೋನಿಂದ ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ನಟ ಮಾತ್ರವಲ್ಲದೆ ಮಾಡೆಲ್ ಹಾಗೂ ಸ್ಟೈಲ್ ಐಕಾನ್ ಆಗಿ ಶೈನ್ ಶೆಟ್ಟಿ ಸಖತ್ ಹೆಸರು ಗಳಿಸಿಕೊಂಡಿದ್ದಾರೆ. ಇವರ ನಿರೂಪಣೆಯಂತೂ ಕಿರುತೆರೆ ರಿಯಾಲಿಟಿ ಶೋ ಪ್ರೇಕ್ಷಕರಿಗೆ ಅಚ್ಚುಮೆಚ್ಚು.ನಟ ಶೈನ್ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿದ್ದಾಗ ನಟಿ ದೀಪಿಕಾ ದಾಸ್ ಅವರ ಜೊತೆ  ಆತ್ಮೀಯವಾಗಿದ್ದರು. ಅವರು ಜೋಡಿಯಾಗಿಯೇ ಹೈಲೈಟ್ ಆಗಿದ್ದರು. ನಂತರ ಇಬ್ಬರೂ ಬಿಗ್ ಬಾಸ್ ಮನೆಯಿಂದ ಹೊರ ಬಂದಾಗಲೂ ಕೂಡ ಶೈನ್ ಶೆಟ್ಟಿ ಹಾಗೂ ದೀಪಿಕಾ ದಾಸ್ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು

Thu Dec 29 , 2022
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಮಯ್ಯ  ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ  ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಸಂಜೆ ವೇಳೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದು, ಅವರ ಪತ್ನಿಯೂ ಜೊತೆಗೆ ತೆರಳಿದ್ದಾರೆ. ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಸರ್ಜರಿಯಿಂದಾಗಿ ಮುಂದಿನ […]

Advertisement

Wordpress Social Share Plugin powered by Ultimatelysocial