SMART PHONE:ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಬಿಡುಗಡೆ;

ಟೆಕ್ನೋ ಕಂಪೆನಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಕೈಗೆಟುಕವ ಬೆಲೆಗೆ ಪರಿಚಯಿಸಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಟೆಕ್ನೋ ಕಂಪನಿಯ ಮೊದಲ 5G ಸ್ಮಾರ್ಟ್‌ಫೋನ್ ಆಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಟೆಕ್ನೋ ಕಂಪೆನಿ ಭಾರತದಲ್ಲಿ ಹೊಸ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.9 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಈಥರ್ ಬ್ಲ್ಯಾಕ್ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು 19,999ರೂ.ಬೆಲೆಯನ್ನು ಹೊಂದಿದ್ದು, ಫೆಬ್ರವರಿ 14 ರಿಂದ ಅಮೆಜಾನ್‌ನಲ್ಲಿ ಮಾರಾಟವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ 1,080×2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.9 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಬಳಕೆದಾರರು ತನ್ನ ಮೆಮೊರಿ ಫ್ಯೂಷನ್ ತಂತ್ರಜ್ಞಾನದ ಮೂಲಕ RAM ಅನ್ನು 11GB ವರೆಗೆ ವಿಸ್ತರಿಸಬಹುದು ಎಂದು ಕಂಪನಿ ಹೇಳಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು AI ಅನ್ನು ಕ್ವಾಡ್ ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದು 32 ದಿನಗಳ ಸ್ಟ್ಯಾಂಡ್‌ಬೈ ಮತ್ತು 183 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.0 ಮತ್ತು GPS ಬೆಂಬಲವನ್ನು ಒಳಗೊಂಡಿದೆ. ಇದಲ್ಲದೆ ಈ ಫೋನ್‌ IPX2 ಸ್ಪ್ಲಾಶ್ ಪ್ರತಿರೋಧವನ್ನು ಕೂಡ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಬೆಲೆ 19,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ 8GB + 128GB RAM ಸ್ಟೋರೇಜ್ ಮಾದರಿಯಲ್ಲಿ ಲಭ್ಯವಿರುತ್ತದೆ. ಇದು ಈಥರ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಬರಲಿದ್ದು, ಫೆಬ್ರವರಿ 14 ರಿಂದ ಅಮೆಜಾನ್‌ನಲ್ಲಿ ಮಾರಾಟವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ಹಿಜಾಬ್ ಗಲಾಟೆ: ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕಾಲೇಜುಗಳನ್ನು ಮುಚ್ಚುವಂತೆ ಕಾಂಗ್ರೆಸ್ ಒತ್ತಾಯಿಸಿದೆ

Tue Feb 8 , 2022
  ಕರ್ನಾಟಕದಲ್ಲಿ ಹಿಜಾಬ್ ಪರ ಮತ್ತು ಹಿಜಾಬ್ ವಿರೋಧಿ ವಿದ್ಯಾರ್ಥಿಗಳ ನಡುವೆ ಮುಖಾಮುಖಿಯಾಗುತ್ತಿರುವ ಮಧ್ಯೆ, ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಪೀಡಿತ ಸಂಸ್ಥೆಗಳನ್ನು ಒಂದು ವಾರ ಮುಚ್ಚುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಕರ್ನಾಟಕ ಕಾಲೇಜಿನಲ್ಲಿ ಉದ್ವಿಗ್ನತೆಯ ನಡುವೆ ಕೇಸರಿ, ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಮುಖಾಮುಖಿಯಾಗಿದ್ದಾರೆ “ಕೆಲವು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಪರಿಸ್ಥಿತಿ ಕೈ ಮೀರಿದೆ, ಒಂದು ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಕೇಸರಿ ಧ್ವಜದಿಂದ ಬದಲಾಯಿಸಲಾಯಿತು. ಕಾನೂನು ಮತ್ತು […]

Advertisement

Wordpress Social Share Plugin powered by Ultimatelysocial