Sonia Gandhi: ಅಸಮಾಧಾನ ಸ್ಫೋಟಗೊಳ್ಳುತ್ತಿದೆ ಅನ್ನೋದು ಊಹಾಪೋಹ: ಸೋನಿಯಾ ಗಾಂಧಿ

ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA (ಇಂಡಿಯಾ) ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಕರೆ ನೀಡಿದ್ದಾರೆ. ಮುಂಬೈನಲ್ಲಿ ಐಎನ್‌ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ಬಿಜೆಪಿ (BJP) ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.ಮೈತ್ರಿಕೂಟದ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸುವುದಾಗಿ ಹೇಳಿವೆ ಎಂದರಲ್ಲದೇ, ಕೆಲವು ರಾಜ್ಯಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟಗೊಳ್ಳುತ್ತಿದೆ ಅನ್ನೋದು ಊಹಾಪೋಹ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

PM Modi Birthday: ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ವಿಶ್!

Sun Sep 17 , 2023
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನ ಮಂತ್ರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಇಡೀ ಜಗತ್ತಿನ ಗಣ್ಯರೆಲ್ಲ ಪ್ರಧಾನಿ ಮೋದಿ ಅವರಿಗೆ ಶುಭಾಶಯವನ್ನು ಕೋರಿದ್ದಾರೆ. ಹಾಗೇ ದೇಶದ ಪ್ರಮುಖ ನಾಯಕರು ಶುಭ ಕೋರಿದ್ದಾರೆ. ಇದೇ ಹೊತ್ತಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಸಂದೇಶ ಕಳುಹಿಸಿದ್ದಾರೆ.   ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ದೋಸ್ತಿ […]

Advertisement

Wordpress Social Share Plugin powered by Ultimatelysocial