Sowjanya murder case: ಕೆಲವೇ ಕ್ಷಣಗಳಲ್ಲಿ ಪಿಐಎಲ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ ಹೈಕೋರ್ಟ್

ಬೆಂಗಳೂರು, ಸೆಪ್ಟೆಂಬರ್‌, 08: ಧರ್ಮಸ್ಥಳ ಸೌಜನ್ಯಾ ಹತ್ಯೆ ಹಾಗೂ ಹತ್ಯಾಚಾರ ಪಕರಣ ಕುರಿತಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಇಂದು (ಸೆಪ್ಟೆಂಬರ್‌ 08) ಹೈಕೋರ್ಟ್‌ ಕೈಗೆತ್ತಿಕೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ.ಕಾಲೇಜು ವಿದ್ಯಾರ್ಥಿನಿ, ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

 

ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಸಿಐಡಿ ಮತ್ತು ಸಿಬಿಐಯಿಂದ ತನಿಖೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿತ್ತು.

ಪ್ರಕರಣದ ನೈಜ ಅಪರಾಧಿಗಳನ್ನು ಬಂಧಿಸಬೇಕು. ತನಿಖೆಯ ಆರಂಭದಲ್ಲಿ ಲೋಪ ಎಸಗಿರುವ ತನಿಖಾಧಿಕಾರಿ ಮತ್ತು ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತವಾಗುತ್ತಿದೆ. ಈ ನಡುವೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇನ್ನೂ ಕೆಲವೇ ಕ್ಷಣಗಳಲ್ಲಿ ಉಚ್ಛ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಬಾಗೇಶ್ವರ ಉಪಚುನಾವಣೆ ಫಲಿತಾಂಶ: ಬಿಜೆಪಿಗೆ ಭರ್ಜರಿ ಗೆಲವು

Fri Sep 8 , 2023
  ಉತ್ತರಾಖಂಡ, ಸೆಪ್ಟೆಂಬರ್‌ 08: ಹಾಲಿ ಬಿಜೆಪಿ ಶಾಸಕರ ನಿಧನದಿಂದ ತೆರವಾಗಿದ್ದ ಉತ್ತರಾಖಂಡದ ಬಾಗೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಸೆಪ್ಟೆಂಬರ್ 5ರಂದು ಉಪಚುನಾವಣೆ ನಡೆದಿತ್ತು. ಇಂದು (ಸೆಪ್ಟೆಂಬರ್ 08) ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಗೆಲವು ಸಾಧಿಸಿದೆ.   ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಯಾಗಿ ಪಾರ್ವತಿ ದಾಸ್ ಬಾಗೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿಯಾಗಿ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸಂತ್ ಕುಮಾರ್ ಸ್ಪರ್ಧಿಸಿದ್ದರೆ, ಹಿಂದೆ 2014ರ ಲೋಕಸಭೆ […]

Advertisement

Wordpress Social Share Plugin powered by Ultimatelysocial