ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ ಪೂರ್ವಭಾವಿ ಸಭೆಯಲ್ಲಿ ಸಿಎಂ ಸ್ಪಷ್ಟನೆ

 

ಬೆಂಗಳೂರು.ಫೆ.24;2022-23 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

2022-23 ನೇ ಸಾಲಿನ  ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ನಡೆದ  ಇಲಾಖಾವಾರು ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೆ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ವಿಚಾರಣೆ ಮಾಡಿ ಸರಿಪಡಿಸುವುದು ಎಲ್ಲರ ಕೆಲಸ ಎಂದರು.

ಇಲಾಖೆ ಬಗ್ಗೆ ಸಹಾನೂಭೂತಿ ಇದೆ. ಹಾಗೇಯೆ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ವ್ಯವಸ್ಥೆಯಲ್ಲಿ ಬದಲಾವಣೆ ತರಲು ಬಜೆಟ್‌ನಲ್ಲಿ ಇಲಾಖೆಗೆ ಹೊಸ ಸ್ವೂರಪ ನೀಡಲಾಗುವುದು. ಆರ್ಥಿಕ ಮಿತಿಗಳನ್ನು ನೋಡಿಕೊಂಡು ನೌಕರರಿಗೆ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದಲ್ಲೆದೆ ಕಾನೂನುಗಳನ್ನು ಬದಲಾಯಿಸುವ ಸಂಬಂಧ ಗಮನಹರಿಸಲಾಗುವುದು ಎಂದರು.

ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಹೊರ ರಾಜ್ಯದಲ್ಲಿ ಆಗಮಿಸುವ ನಕಲಿ ಮದ್ಯ ತಡೆಗೆ ಸರ್ಕಾರ ಉಗ್ರ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರುತ್ತದೆ. ನಕಲಿ ಜಾಲದ ಹಿಂದೆ ಯಾರೇ ಇದ್ದರೂ ಅವರನ್ನು ಮುಲಾಜಿಲ್ಲದೇ ಅಮಾನತು ಮಾಡುವಂತೆ ಇಲಾಖಾ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು.

ಸಿಎಲ್ 7, ಸಿಎಲ್ 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ.ಇದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸಮಾಡುವಂತೆ ಸೂಚಿಸಿದರಲ್ಲದೇ ಸಮಯ ನೀಡಿದರೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ಟೂರ್ನಿಯ ನಂತರ ನಾನು ನಿವೃತ್ತಿಯಾದಾಗ, ತಂಡವು ಹೆಚ್ಚು ಬಲಿಷ್ಠವಾಗಿರುತ್ತದೆ: ಮಿಥಾಲಿ ರಾಜ್

Thu Feb 24 , 2022
ಭಾರತ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಇಷ್ಟು ದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅನುಭವಿ ಬ್ಯಾಟರ್ ಬಹುಶಃ ತನ್ನ ಕ್ರಿಕೆಟ್ ವೃತ್ತಿಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದಾರೆ. ODIಗಳಲ್ಲಿ ಮಹಿಳಾ ಕ್ರಿಕೆಟಿಗರಿಗೆ ಅತ್ಯಧಿಕ ರನ್‌ಗಳಿಂದ ಹಿಡಿದು ಅಗ್ರ ಐದು ಅತ್ಯುತ್ತಮ ಬ್ಯಾಟಿಂಗ್ ಸರಾಸರಿಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುವವರೆಗೆ, ಮಿಥಾಲಿ ರಾಜ್ ಇಲ್ಲಿಯವರೆಗೆ ಎಲ್ಲವನ್ನೂ ಸರಿಯಾಗಿ ಮಾಡಿದ್ದಾರೆ. ಆದರೆ ಕ್ರಿಕೆಟಿಗರು ಇನ್ನೂ ವಿಶ್ವಕಪ್ ಪ್ರಶಸ್ತಿಯ ಕನಸು ಕಾಣುತ್ತಿದ್ದಾರೆ. ವುಮೆನ್ ಇನ್ ಬ್ಲೂ ನ್ಯೂಜಿಲೆಂಡ್‌ನಲ್ಲಿ ಮೆಗಾ […]

Advertisement

Wordpress Social Share Plugin powered by Ultimatelysocial