ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿಯ ವೇತನ

 

ಶಿವಮೊಗ್ಗ: ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿ ವೇತನವನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಿಸುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸಿಬ್ಬಂದಿಗೆ ಏರ್ಪಡಿಸಿದ್ದ ತಾಂತ್ರಿಕ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಮಾದರಿಯ ವೇತನ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇದು ಬಜೆಟ್‌ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದರು.

ರಾಜ್ಯದ ವಿವಿಧ ಇಲಾಖೆಗಳಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಇದರ ಒತ್ತಡ ಈಗಿರುವ ನೌಕರರ ಮೇಲೆ ಬೀಳುತ್ತಿದೆ. ಪಶುಪಾಲನಾ ಇಲಾಖೆಯಲ್ಲಿ ಇರುವಂತಹ ಸಮಸ್ಯೆಗಳ ಕುರಿತು ಶೀಘ್ರ ಸಭೆ ನಡೆಸಲಾಗುವುದು. ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಇಲಾಖಾ ಸಿಬ್ಬಂದಿ ಕುಂದು-ಕೊರತೆಗಳನ್ನೂ ಪರಿಹರಿಸಲಾಗುವುದು. ಪಶುಪಾಲನಾ ಇಲಾಖೆಯಲ್ಲಿ ಕೆಳ ಹಂತದಲ್ಲಿ ಕೆಲಸ ಮಾಡುವ ಸಿಬ್ಬಂದಿ ಮೂಕ ಪ್ರಾಣಿಗಳ ಸೇವೆ ಮಾಡುತ್ತಿರುವುದು ಅತ್ಯಂತ ಪುಣ್ಯದ ಕೆಲಸ ಎಂದು ಬಣ್ಣಿಸಿದರು.

ಸರ್ಕಾರಿ ನೌಕರರ ಹಲವು ಬೇಡಿಕೆ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸಬೇಕು ಹಾಗೂ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವನ್ನು ಕೂಡ ಸರ್ಕಾರಕ್ಕೆ ಮಾಡಲಾಗಿದೆ ಎಂದು ವಿವರ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಎಫ್‌. ಹೊನ್ನಳ್ಳಿ, ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕ ಶಿವರುದ್ರಪ್ಪ ಎಲಿ, ಪಶು ವೈದ್ಯಾಧಿಕಾರಿಗಳಾದ ಡಾ.ಕೆ.ಎಂ. ಪ್ರಸನ್ನ, ಡಾ.ಕೆ.ಎಂ. ನಾಗರಾಜ್, ಡಾ.ಅರವಿಂದ್, ಡಾ.ಮಹದೇವ್ ಶರ್ಮಾ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಿ ಮಿಸ್ಟೀರಿಯಸ್ ಕೇಸ್ ಆಫ಼್ ಮಾಯಾವಿ'. ಯಾರು ಈ ಮಾಯಾವಿ?

Tue Mar 1 , 2022
೨೦೨೦ ರಲ್ಲಿ ತೆರೆಕಂಡ ಶಿವಾಜಿ ಸೂರತ್ಕಲ್ ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಈಗ ಶಿವಾಜಿ ಮತ್ತೆ ಬರುತ್ತಿದ್ದಾರೆ, ಮತ್ತೊಂದು ಕೇಸ್ ನೊಂದಿಗೆ. ಚಿತ್ರದ ಶೀರ್ಷಿಕೆ – “ಶಿವಾಜಿ ಸೂರತ್ಕಲ್, ದಿ ಮಿಸ್ಟೀರಿಯಸ್ ಕೇಸ್ ಆಫ಼್ ಮಾಯಾವಿ’. ಯಾರು ಈ ಮಾಯಾವಿ? ಶಿವಾಜಿ ತನಗೆ ಎದುರಾದ ಮತ್ತೊಂದು ವಿಚಿತ್ರ ಪ್ರಕರಣವನ್ನು ಹೇಗೆ ಪರಿಹರಿಸುತ್ತಾರೆ ಎಂಬುದೇ ಈ ಸಿನಿಮಾದ ಮೂಲ ಕಥೆ. ಈ ಬಾರಿ ನಾವು, ಶಿವಾಜಿಯವರ ಖಾಸಗಿ ಜೀವನವನ್ನು ಮತ್ತಷ್ಟು ಹತ್ತಿರದಿಂದ […]

Advertisement

Wordpress Social Share Plugin powered by Ultimatelysocial