ಟಿಡಿಪಿ ಮುಖಂಡನ ಕಾಮದಾಹಕ್ಕೆ ಹೆದರಿ 4ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

ಟಿಡಿಪಿ ಪಾರ್ಟಿ ಮುಖಂಡನ ಲೈಂಗಿಕ ಕಿರುಕುಳದಿಂದ ಬೇಸತ್ತ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.ಒಂಭತ್ತನೇ ತರಗತಿ ಓದುತ್ತಿರುವ ಹದಿನಾಲ್ಕು ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾಳೆ.ಟಿಡಿಪಿ ಮುಖಂಡ ವಿನೋದ್‌ ಜೈನ್‌ ಎಂಬಾತ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬಾಲಕಿ ಡೆತ್‌ ನೋಟ್‌ನಲ್ಲಿ ಬರೆದಿಟ್ಟಿದ್ದಾಳೆ.ಆರೋಪಿ ವಿನೋದ್‌ ಜೈನ್‌ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ ನಲ್ಲೇ ವಾಸಿಸುತ್ತಿದ್ದಾನೆ. ಈತ ಕಳೆದ ಬಾರಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಪೊರೇಟರ್‌ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ. ಸದ್ಯ ಡೆತ್‌ ನೋಟ್‌ ಆಧಾರದಲ್ಲಿ ಆರೋಪಿ ವಿನೋದ್‌ ಜೈನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ; ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

Tue Feb 1 , 2022
  ಬೆಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ನಗರದ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿಗಳ ಮೇಲೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಆನಂದ್, ನಾಗೇಶ್, ಗಿರೀಶ್, ರಂಜಿತ್ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದೆ.ಬಹುಜನ ಸಮಾಜವಾದಿ ಪಾರ್ಟಿ ಬೆಂಗಳೂರು ದಕ್ಷಿಣ ವಿಭಾಗದ ಅಧ್ಯಕ್ಷ ಗೋಪಾಲಲಕ್ಷ್ಮಿ ಎಂಬುವವರ ತಾಯಿ ಯಲ್ಲಮ್ಮ ಅವರನ್ನು ಚಿಕಿತ್ಸೆಗೆಂದು ಜ.21ಕ್ಕೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆ ತಂದಿದ್ದರು. ಜ.28 ರಂದು ತಲೆಯ […]

Advertisement

Wordpress Social Share Plugin powered by Ultimatelysocial