‘ಉಕ್ರೇನ್’ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಉಕ್ರೇನ್ ನಲ್ಲಿರುವಂತ ಕನ್ನಡಿಗರನ್ನು ರಕ್ಷಿಸೋದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಆ ಪ್ರಯತ್ನದಲ್ಲಿಯೇ ಸರ್ಕಾರ ನಿರತವಾಗಿದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದ್ದಾರೆ.ಈ ಬಗ್ಗೆ ತಮ್ಮ ಆರ್ ಟಿ ನಗರದ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉಕ್ರೇನ್ ನಲ್ಲಿ ಇರುವಂತ ಕನ್ನಡಿಗ ವಿದ್ಯಾರ್ಥಿಗಳನ್ನು ವಾಪಾಸ್ ಕರೆತರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಉಸ್ತುವಾರಿಗಾಗಿ ನೇಮಿಸಲಾಗಿದೆ. ದೆಹಲಿಯಿಂದ ರಾಜ್ಯಕ್ಕೆ ಕರೆತರುವ ವ್ಯವಸ್ಥೆ ಮಾಡಲಿದ್ದಾರೆ ಎಂದರು.ಉಕ್ರೇನ್ ನಲ್ಲಿ ಎಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸಿಲುಕಿದ್ದಾರೋ, ಅಲ್ಲಿಂದಲೇ ಅವರನ್ನು ರಕ್ಷಣೆ ಮಾಡೋದಕ್ಕೆ ಕೇಂದ್ರ ವಿದೇಶಾಂಗ ಕಾರ್ಯದರ್ಶಿಯನ್ನು ಕೇಳಿಕೊಳ್ಳಲಾಗಿದೆ. ಅಲ್ಲದೇ ಊಟ, ಉಪಚಾರಕ್ಕೂ ವ್ಯವಸ್ಥೆ ಮಾಡುವಂತೆ ಸಹ ಹೇಳಿದ್ದೇವೆ ಎಂದರು.ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ಉಕ್ರೇನ್ ನಲ್ಲಿ ಸಿಲುಕಿರುವಂತ ಕನ್ನಡಿಗರನ್ನು ಮರಳಿ ಕರೆತರುವಂತ ಕೆಲಸದಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾರ್ಚ್ 4 ರಿಂದ 30 ರವರೆಗೆ ವಿಧಾನಸೌಧ ಸುತ್ತ 2 ಕಿ.ಮೀ. ಸುತ್ತ ನಿಷೇಧಾಜ್ಞೆ

Tue Mar 1 , 2022
ಮಾರ್ಚ್ 4 ರಿಂದ ಬಜೆಟ್ ಅಧಿವೇಶನ (Budget Session 2022) ಆರಂಭವಾಗುತ್ತಿರುವ ಹಿನ್ನೆಲೆ ವಿಧಾನಸೌಧದ (Vidhanasoudha) ಸುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ (Kama Pant) ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬಜೆಟ್ ಅಧಿವೇಶನದ ಸಮಯದಲ್ಲಿ ವಿಪಕ್ಷಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ (Protest) ಕೈಗೊಳ್ಳುವ ಸಾಧ್ಯತೆಗೊಳಿರುತ್ತವೆ.ಆದ್ದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ತೊಂದರೆ […]

Advertisement

Wordpress Social Share Plugin powered by Ultimatelysocial