ಎಲೆಕ್ಟ್ರಿಕ್ ಬೈಕ್ ಗಳ 1000 ಚಾರ್ಜಿಂಗ್ ಸೌಲಭ್ಯ ಸ್ಥಾಪನೆ; ಎಥರ್-ಎಸ್ಕಾಂ ನಡುವೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ.ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಹಿ ಹಾಕಲಾಯಿತು.ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ.ಈ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದೆ.ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು.ಈ ವೇಳೆ ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Please follow and like us:

Leave a Reply

Your email address will not be published. Required fields are marked *

Next Post

ಮಲಯಾಳಂನಲ್ಲಿ ಟ್ವೀಟ್ ಮಾಡಿದ ದುಬೈ ದೊರೆಗೆ ಅರೇಬಿಕ್ ಭಾಷೆಯಲ್ಲಿ ಪ್ರತ್ಯುತ್ತರ ನೀಡಿದ ಕೇರಳ ಸಿಎಂ..!

Thu Feb 3 , 2022
ದುಬೈ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಎಮಿರೇಟ್ಸ್‌ನಲ್ಲಿ ಭೇಟಿ ಮಾಡಿದ ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಿ ಮತ್ತು ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು, ಮಲಯಾಳಂನಲ್ಲಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಟ್ವೀಟ್ ಜೊತೆಗೆ, ದುಬೈ ಎಕ್ಸ್‌ಪೋ 2020ರ ಸ್ಥಳದಲ್ಲಿ ವಿಜಯನ್‌ಗೆ ನೀಡಿದ ಸ್ವಾಗತದ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ಈ ಟ್ವೀಟ್ ಅನ್ನು ಕೇರಳ ಸಿಎಂ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.ಯುಎಇ […]

Advertisement

Wordpress Social Share Plugin powered by Ultimatelysocial