ಕೋವಿಡ್-19: ದೇಶದಲ್ಲಿಂದು 7,554 ಹೊಸ ಕೇಸ್ ಪತ್ತೆ, 223 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 7,554 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 223 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,38,599ಕ್ಕೆ ಏರಿಕೆಯಾಗಿದೆ.

ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,14,066ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 85,680ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 14,123 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,23,38,673ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 9,01,647 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 76,83,82,993 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,77,70,25,914 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೈಕ್ ಮುಖಾಮುಖಿ: ಓರ್ವನ ಸಾವು, ಇಬ್ಬರು ಗಂಭೀರ

Wed Mar 2 , 2022
ಸಾಗರ: ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ನಾಗಪ್ಪ ಹಾಗೂ ಅವರ ಪುತ್ರ ಲೋಹಿತ್ (16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದದಲ್ಲಿ ನಿವಾಸಿ ಕಿರಣ್ (20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್ ಹಾಗೂ ಕಿರಣ್ ಸ್ಥಿತಿ ಗಂಭೀರವಾಗಿದೆ. ಸಾಗರ […]

Advertisement

Wordpress Social Share Plugin powered by Ultimatelysocial