ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು.ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು ಎಸ್ಕಾಂಗಳೊಂದಿಗೆ ಸಮನ್ವಯ ವಹಿಸಲಿವೆ.ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ.ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು.ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಲೋಕಸಭೆ ಸ್ಪೀಕರ್ ಓಮ್ ಬಿರ್ಲಾ, ಬಿಜೆಪಿ ಸಂಸದನಿಗೆ ಮಾತನಾಡಲು ಅವಕಾಶ ನೀಡುತ್ತೇನೆ ಎಂದ ರಾಹುಲ್ ಗಾಂಧಿ ̤

Thu Feb 3 , 2022
  ನವದೆಹಲಿ:ಲೋಕಸಭೆ ಸ್ಪೀಕರ್ ಓಮ್ ಬಿರ್ಲಾ, ಸರಿಯಾದ ಸಂಸದೀಯ ವರ್ತನೆಯನ್ನು ಪಾಲಿಸದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಕಲಾಪದಲ್ಲಿ ಪಾಠ ಮಾಡಿದ್ದಾರೆ.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ಮಾತನಾಡುತ್ತಾ ತಮ್ಮ ಮಾತು ಮುಗಿದ ಬಳಿಕ ಮತ್ತೋರ್ವ ಸಂಸದನಿಗೆ ಮಾತನಾಡಲು ಅನುಮತಿ ನೀಡುವುದಾಗಿ ಹೇಳಿದರು.ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಓಮ್ ಬಿರ್ಲಾ, ಅನುಮತಿ ನೀಡಲು ನೀವು […]

Advertisement

Wordpress Social Share Plugin powered by Ultimatelysocial