ಹಿರಿಯ ನಾಗರಿಕರೇ ಗಮನಿಸಿ : ಕುಂದುಕೊರತೆ ಆಲಿಸಲು 14567 ಉಚಿತ ಸಹಾಯವಾಣಿ

 

ದಾವಣಗೆರೆ : ಹಿರಿಯ ನಾಗರಿಕರ ಕುಂದುಕೊರತೆಗಳನ್ನು ಪರಿಹರಿಸುವ ಒಂದು ಸಾರ್ವಜನಿಕ ವೇದಿಕೆಯಾಗಿ 14567 ಎಲ್ಡರ್‍ಲೈನ್ ಸಹಾಯವಾಣಿ ಸಂಖ್ಯೆಯನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣಾಧಿಕಾರಿ ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ. ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ರೂಪುಗೊಳಿಸಿರುವ ಒಂದು ಮಹತ್ವಪೂರ್ಣ ಯೋಜನೆಯಾದ ಸಹಾಯವಾಣಿ ಸಂಖ್ಯೆ 14567 ಕ್ಕೆ ಕರೆ ಮಾಡುವ ಹಿರಿಯ ನಾಗರಿಕರಿಗೆ ಕೋವಿಡ್ ಸಂಬಂಧಿತ ವಿಷಯಗಳ ಕುರಿತು ಮಾಹಿತಿ, ಆಸ್ಪತ್ರೆ, ವೃದ್ಧಾಶ್ರಮಗಳು, ಆರೈಕೆ ಕೇಂದ್ರಗಳು, ಹಗಲು ಯೋಗಕ್ಷೇಮ ಕೇಂದ್ರಗಳು ಹಾಗೂ ಇತ್ಯಾದಿ ವಿಚಾರಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಗುತ್ತದೆ. ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳ ಬಗ್ಗೆ, ಪಿಂಚಣಿ ಯೋಜನೆಯ ಬಗ್ಗೆ ಮಾರ್ಗದರ್ಶನ ನೀಡುವುದಲ್ಲದೇ ಹಿರಿಯ ನಾಗರಿಕರ ಪಾಲನೆ ಪೋಷಣೆ ಕಾಯ್ದೆ ಬಗ್ಗೆ ಮತ್ತು ಕಾನೂನಾತ್ಮಕ ಸಮಸ್ಯೆಗಳ ಬಗ್ಗೆಯು ಮಾರ್ಗದರ್ಶನ ನೀಡಲಾಗುವುದು. ಭಾವನಾತ್ಮಕ ಬೆಂಬಲ ಹಾಗೂ ನಿಂದನೆಗೊಳಪಟ್ಟ, ಪರಿತ್ಯಜಿಸಲ್ಪಟ್ಟ ಹಿರಿಯರನ್ನು ರಕ್ಷಿಸುವುದು ಮತ್ತು ಅಂತಹ ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಇತ್ಯರ್ಥಗೊಳಿಸುವ ಸೇವೆಗಳನ್ನು ಒದಗಿಸಲಾಗುವುದು. ಇದರ ಸದುಪಯೋಗವನ್ನು ಜಿಲ್ಲೆಯ ಹಿರಿಯ ನಾಗರಿಕರು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ 14ನೇ ಮುಖ್ಯ ರಸ್ತೆ, ಎಂ.ಸಿಸಿ. ‘ಬಿ’ ಬ್ಲಾಕ್, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಕುವೆಂಪುನಗರ, ದಾವಣಗೆರೆ 577004 ಅಥವಾ ದೂರವಾಣಿ ಸಂಖ್ಯೆ 08192-263936 ಕ್ಕೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆ ಖಾಲಿ

Fri Feb 4 , 2022
ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್‌1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) 2018-19 ಮತ್ತು 2020-21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು […]

Advertisement

Wordpress Social Share Plugin powered by Ultimatelysocial