ರೈತರ ಸಾಲ ಮನ್ನಾ ಸೇರಿ ಕಾಂಗ್ರೆಸ್‌ ಪ್ರಣಾಳಿಕೆಯ ಪ್ರಮುಖ ಅಂಶಗಳು

ಲಖನೌ: ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ರೈತರು, ಕೋವಿಡ್ ಯೋಧರು, ಶಿಕ್ಷಕರು ಮತ್ತು ಮಹಿಳೆಯರಿಗೆ ಸಂಬಂಧಿಸಿದ ವಿಚಾರಗಳನ್ನು ಉಲ್ಲೇಖಿಸಿ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು ಇಲ್ಲಿವೆ…

*ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು.

*ಭತ್ತ ಮತ್ತು ಗೋಧಿಯನ್ನು ಕ್ವಿಂಟಲ್‌ಗೆ ₹ 2500 ಹಾಗೂ ಕಬ್ಬನ್ನು ₹ 400ಕ್ಕೆ ಖರೀದಿಸಲಾಗುವುದು.

*ವಿದ್ಯುತ್ ದರವನ್ನು ಅರ್ಧದಷ್ಟು ಕಡಿಮೆ ಮಾಡಲಾಗುವುದು.

*ಸಾಂಕ್ರಾಮಿಕದ ಅವಧಿಯಲ್ಲಿ ಬಾಕಿ ಇರುವ ವಿದ್ಯುತ್‌ ಬಿಲ್‌ ಅನ್ನು ಮನ್ನಾ ಮಾಡಲಾಗುವುದು.

*ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ಕುಟುಂಬಗಳಿಗೆ ₹ 25,000 ನೀಡಲಾಗುವುದು.

*ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ಸಾರ್ವಜನಿಕ ವಲಯಗಳಲ್ಲಿ ಖಾಲಿ ಇರುವ 12 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಜೊತೆಗೆ ಎಂಟು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗುವುದು.

*ಶಾಲೆಗಳಲ್ಲಿ ಅಡುಗೆ ತಯಾರಿಸುವ ವ್ಯಕ್ತಿಗೆ ₹ 5,000 ವೇತನ ನೀಡಲಾಗುವುದು.

*ಮಹಿಳಾ ಪೊಲೀಸರಿಗೆ ಹತ್ತಿರದ ಸ್ಥಳದಲ್ಲಿ ಪೋಸ್ಟಿಂಗ್ ಕೊಡಲಾಗುವುದು.

*ಮೃತಪಟ್ಟ ಕೋವಿಡ್ ಯೋಧರ ಕುಟುಂಬಗಳಿಗೆ ₹ 50 ಲಕ್ಷ ಪರಿಹಾರ ನೀಡಲಾಗುವುದು.

*ಅನುಭವ ಮತ್ತು ನಿಯಮಗಳ ಆಧಾರದ ಮೇಲೆ ಶಿಕ್ಷಕರು ಹಾಗೂ ಶಿಕ್ಷಾ ಮಿತ್ರರನ್ನು ಖಾಯಂಗೊಳಿಸಲಾಗುವುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadas

 

Please follow and like us:

Leave a Reply

Your email address will not be published. Required fields are marked *

Next Post

ಫೆಬ್ರವರಿ 14 ರಂದು ಪಿಎಸ್ಎಲ್ವಿ-ಸಿ 52 ನೊಂದಿಗೆ ಇಸ್ರೋ 2022 ರಲ್ಲಿ ಉಡಾವಣಾ ಕಾರ್ಯಾಚರಣೆಯನ್ನು ಪ್ರಾರಂಭ;

Wed Feb 9 , 2022
PSLV-C52 ಅನ್ನು 1710 ಕೆಜಿ ತೂಕದ EOS-04 ಅನ್ನು 529 ಕಿಮೀ ಸೂರ್ಯನ ಸಿಂಕ್ರೊನಸ್ ಧ್ರುವೀಯ ಕಕ್ಷೆಯಲ್ಲಿ ಸುತ್ತುವಂತೆ ವಿನ್ಯಾಸಗೊಳಿಸಲಾಗಿದೆ. ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ 2022 ರ ಮೊದಲ ಉಡಾವಣಾ ಕಾರ್ಯಾಚರಣೆಯನ್ನು ಫೆಬ್ರವರಿ 14 ರಂದು ನಿಗದಿಪಡಿಸಲಾಗಿದೆ, PSLV-C52 ಭೂ ವೀಕ್ಷಣಾ ಉಪಗ್ರಹವನ್ನು (EOS-04) ಕಕ್ಷೆಯಲ್ಲಿ ಸುತ್ತುತ್ತದೆ. ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ-ಸಿ52) ಉಡಾವಣೆ ಸೋಮವಾರ ಸಂಜೆ 05:59 ಗಂಟೆಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ […]

Advertisement

Wordpress Social Share Plugin powered by Ultimatelysocial