ರಾಮನಗರ: ಮಾ. 12ರಂದು ಮೆಗಾ ಲೋಕ ಅದಾಲತ್‌

ರಾಮನಗರ: ಇದೇ 12ರಂದು ಜಿಲ್ಲೆಯ ವಿವಿಧ ನ್ಯಾಯ ಪೀಠಗಳಲ್ಲಿ ಮೆಗಾ ಲೋಕ ಅದಾಲತ್‌ ನಡೆಯಲಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದು ಎಂದು ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶೆ ಬಿ.ಜಿ.ರಮಾ ತಿಳಿಸಿದ್ದಾರೆ.ಜಿಲ್ಲೆಯಾದ್ಯಂತ 20 ನ್ಯಾಯಪೀಠಗಳಲ್ಲಿ ಏಕಕಾಲಕ್ಕೆ ಈ ಅದಾಲತ್‌ ನಡೆಯಲಿದೆ. ಕಕ್ಷಿದಾರರು ಹಾಗೂ ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಹುದು. ಇಲ್ಲವೇ ಆನ್‌ಲೈನ್‌ ಮೂಲಕವೂ ಹಾಜರಾಗಬಹುದುಎಂದಿದ್ದಾರೆ.

ರಾಜಿ ಪ್ರಕರಣಗಳು: ಜಿಲ್ಲೆಯಲ್ಲಿ ಒಟ್ಟು 45,318 ಪ್ರಕರಣಗಳು ಬಾಕಿ ಇದ್ದು, ಇವುಗಳ ಪೈಕಿ ವಿವಿಧ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ತಿಳಿಸಿದರು.ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಕ್ರಿಮಿನಲ್ ಪ್ರಕರಣಗಳು, ನೆಗೋಷಲ್ ಇನ್ಸ್ಟ್ರೂಮೆಂಟ್ ಕಾಯ್ದೆ, ಸಾಲ ವಸೂಲಾತಿ, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಅಪಘಾತ, ಕಾರ್ಮಿಕ ವಿವಾದ, ಗಣಿ ಮತ್ತು ಭೂ ವಿಜ್ಞಾನ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ, ಆಸ್ತಿ ವಿಭಾಗ, ಹಕ್ಕು ಘೋಷಣೆ, ಶಾಶ್ವತ ನಿರ್ಭಂದಕಾಜ್ಞೆ ಹಾಗೂ ಇತರೆ ಕ್ರಿಮಿನಲ್ ಪ್ರಕರಣಗಳನ್ನು ರಾಜಿಗಾಗಿ ನಿಗದಿಪಡಿಸಲಾಗಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Helth Tips :ʼಆರೋಗ್ಯʼಕ್ಕೆ ಉತ್ತಮ ಮಡಕೆ ನೀರು

Wed Feb 2 , 2022
ಬೇಸಿಗೆಯ ಬೇಗೆ ಆರಂಭವಾಗಿದೆ. ಎಷ್ಟು ನೀರು ಕುಡಿದರೂ ಸಾಕೆನಿಸದ ದಾಹ ಕಾಡುತ್ತಿದೆ. ಆರೋಗ್ಯದ ದೃಷ್ಟಿಯಿಂದಲೂ ದೇಹ ನಿರ್ಜಲೀಕರಣಗೊಳ್ಳುವುದು ಉತ್ತಮವಲ್ಲ. ಇವುಗಳಿಂದ ರಕ್ಷಣೆ ಪಡೆಯಲು ಇಲ್ಲಿದೆ ಒಂದು ಉಪಾಯ.ಮಡಕೆಯಲ್ಲಿ ನೀರನ್ನು ಸಂಗ್ರಹಿಸಿಟ್ಟು ಕುಡಿಯುವುದರಿಂದ ಆರೋಗ್ಯವೂ ವೃದ್ಧಿಸುತ್ತದೆ ಎಂಬುದನ್ನು ವಿಜ್ಞಾನಿಗಳು ಸಾಬೀತುಪಡಿಸಿದ್ದಾರೆ.ಮಣ್ಣಿನ ಮಡಿಕೆಯಲ್ಲಿ ಅಥವಾ ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿದ ನೀರು ಸ್ಟೀಲ್, ಪ್ಲಾಸ್ಟಿಕ್ ಅಥವಾ ಗಾಜಿನ ಜಾಡಿಗಳಲ್ಲಿ ಇಟ್ಟ ನೀರಿಗಿಂತ ಉತ್ತಮವಾದುದು. ಮಡಕೆಯ ನೀರು ಅಪ್ಪಟವಾಗಿದ್ದು ಜೀವ ರಾಸಾಯನಿಕ ಕ್ರಿಯೆ ಸುಲಭವಾಗಿಸುತ್ತದೆ.ಬಾಟಲ್ ಗಳು […]

Advertisement

Wordpress Social Share Plugin powered by Ultimatelysocial