ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ; ಸಿಎಂ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣದ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಸಿಎಂ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮಧ್ಯಂತರ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ.ಸಾರಿಗೆ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ಸಿಎಂ ತಿಳಿಸಿದ್ದಾರೆ.ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ಎಂ.ಆರ್. ಶ್ರೀನಿವಾಸಮೂರ್ತಿ, ತಾವು ಅಧ್ಯಕ್ಷರಾದ ಬಳಿಕ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, KSRTC ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, BMTC ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆ ಮಾರಿದ ಅಮಿತಾಬ್ ಬಚ್ಚನ್ ಎಷ್ಟು ಕೋಟಿ ಇರಬಹುದು ?

Thu Feb 3 , 2022
ನಟ ಅಮಿತಾಬ್ ಬಚ್ಚನ್ ಬಹಳ ಭಾವುಕ ಸಂಬಂಧ ಹೊಂದಿದ್ದ ಮನೆಯೊಂದನ್ನು ಮಾರಾಟ ಮಾಡಿದ್ದಾರೆ.ಅಮಿತಾಬ್ ಬಚ್ಚನ್ ಅವರ ತಂದೆ, ತಾಯಿ ವಾಸಿಸಿದ್ದ ದಕ್ಷಿಣ ಮುಂಬೈನ ಗುಲ್‌ಮೊಹರ್ ಪಾರ್ಕ್‌ ಬಳಿ ಇದ್ದ ‘ಸೋಪಾನ್’ ಹೆಸರಿನ ಬಂಗ್ಲೆಯನ್ನು ಮಾರಾಟ ಮಾಡಿದ್ದಾರೆ.ಅಮಿತಾಬ್ ಬಚ್ಚನ್ ತಾಯಿ ತೇಜಿ ಬಚ್ಚನ್ ಅವರ ಹೆಸರಿನಲ್ಲಿ ಈ ಬಂಗ್ಲೆ ಇತ್ತು. ಬಳಿಕ ಅಮಿತಾಬ್ ಬಚ್ಚನ್ ಹೆಸರಿಗೆ ಈ ಆಸ್ತಿ ವರ್ಗವಾಯಿತು. ಹಲವು ವರ್ಷಗಳ ಕಾಲ ಈ ಬಂಗ್ಲೆಯನ್ನು ನೋಡಿಕೊಂಡ ಅಮಿತಾಬ್ ಬಚ್ಚನ್ […]

Advertisement

Wordpress Social Share Plugin powered by Ultimatelysocial