ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಆಧಾರದ ಮೇಲೆ ಕಾರ್ಯಕರ್ತೆಯರಿಗೆ 10 ಸಾವಿರ ರೂ.

ಮತ್ತು ಸಹಾಯಕಿಯರಿಗೆ 5 ಸಾವಿರ ರೂ., ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 6250 ರೂ. ಪಾವತಿಸಲಾಗುವುದು.

ಕೊಡಗು, ಬಳ್ಳಾರಿ, ಮೈಸೂರು, ತುಮಕೂರು, ಚಿಕ್ಕಮಗಳೂರು, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ಅರ್ಜಿ ಭರ್ತಿ ಮಾಡಬಹುದಾಗಿದೆ. ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ರಾಜಕೀಯ ಹಿತಾಸಕ್ತಿಗೆ ಸಂಕಷ್ಟಕ್ಕೀಡಾದ ಜನರು; ಪಾದಯಾತ್ರೆ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

Tue Mar 1 , 2022
  ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಅಧಿಕಾರ ಇದ್ದಾಗ ಮೇಕೆದಾಟು ಯೋಜನೆಗಾಗಿ ಏನೂ ಮಾಡಿಲ್ಲ.ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ವಿಚಾರವಾಗಿ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗ ರಾಜಕೀಯ ಹಿತಾಸಕ್ತಿಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಯಾವುದೇ ಉಪಯೋಗವಾಗುತ್ತಿಲ್ಲ ಬದಲಿಗೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಬೆಂಗಳೂರಿಗರಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಟ್ರಾಫಿಕ್ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಕಾಂಗ್ರೆಸ್ ನಿಂದ ತೊಂದರೆಯಾಗುತ್ತಿದೆ ಬಿಟ್ಟರೆ ಯಾವುದೇ ಉಪಯೋಗವಿಲ್ಲ […]

Advertisement

Wordpress Social Share Plugin powered by Ultimatelysocial