SMART PHONE:ಪೊಕೊ M4 ಪ್ರೊ 5G ಭಾರತದಲ್ಲಿ ಬಿಡುಗಡೆ;

ಪೊಕೊ ಕಂಪನಿಯು ಕಡಿಮೆ ಅವಧಿಯಲ್ಲಿ ಭಿನ್ನ ಮೊಬೈಲ್ ಶ್ರೇಣಿಯ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಪೊಕೊ ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಇತ್ತೀಚಿನ ಪೊಕೊ M3 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ ಮತ್ತು ಬೆಲೆಯಿಂದ ಹೆಚ್ಚು ಸದ್ದು ಮಾಡಿದೆ.

ಡಿಸ್‌ಪ್ಲೇ ರಚನೆ ಹೇಗೆ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ DCI-P3 ವೈಡ್ ಕಲರ್ ಗ್ಯಾಮಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11-ಆಧಾರಿತ MIUI 12.5 ಕಸ್ಟಮ್ ಸ್ಕಿನ್ ಔಟ್ ಆಫ್ ದಿ ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಡೈನಾಮಿಕ್ RAM ವಿಸ್ತರಣೆಯನ್ನು ಬೆಂಬಲಿಸುತ್ತದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದು 119-ಡಿಗ್ರಿ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಸೆಟಪ್‌ ನೈಟ್ ಮೋಡ್ ಸೇರಿದಂತೆ ಕೃತಕ ಬುದ್ಧಿಮತ್ತೆ (AI) ಚಾಲಿತ ಫೀಚರ್ಸ್‌ಗಳ ಪಟ್ಟಿಯಿಂದ ಬೆಂಬಲಿತವಾಗಿದೆ. ಅಲ್ಲದೆ ಇದು LED ಫ್ಲ್ಯಾಷ್‌ನೊಂದಿಗೆ ಜೋಡಿಸಲ್ಪಟ್ಟಿದೆ.

ಬ್ಯಾಟರಿ ಮತ್ತು ಇತರೆ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, NFC, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಎಕ್ಸ್-ಆಕ್ಸಿಸ್ ಲೀನಿಯರ್ ಮೋಟಾರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

LAPTOP:ಏಸರ್ ಆಸ್ಪೈರ್ 3 ಭಾರತದಲ್ಲಿ ಬಿಡುಗಡೆ;

Wed Feb 9 , 2022
ಏಸರ್ ತನ್ನ ಎರಡನೇ ಮೇಡ್ ಇನ್ ಇಂಡಿಯಾ ಲ್ಯಾಪ್‌ಟಾಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ — ಏಸರ್ ಆಸ್ಪೈರ್ 3. ಏಸರ್‌ನಿಂದ ಹೊಸ ಬಜೆಟ್ ಲ್ಯಾಪ್‌ಟಾಪ್ ಅನ್ನು ನೋಯ್ಡಾದಲ್ಲಿರುವ ಸೌಲಭ್ಯದಲ್ಲಿ ತಯಾರಿಸಲಾಗುತ್ತದೆ ಮತ್ತು ಇದು ಭಾರತದಲ್ಲಿ ತಯಾರಿಸಲ್ಪಟ್ಟ ಕಂಪನಿಯ ಎರಡನೇ ಲ್ಯಾಪ್‌ಟಾಪ್ ಆಗಿದೆ. ಏಸರ್‌ನ ಇತ್ತೀಚಿನ ಮೇಡ್-ಇನ್-ಇಂಡಿಯಾ ಲ್ಯಾಪ್‌ಟಾಪ್ ಇಂಟೆಲ್ ಪ್ರೊಸೆಸರ್‌ನಿಂದ ಚಾಲಿತವಾಗಿದೆ ಮತ್ತು ಬಹು ಕಾನ್ಫಿಗರೇಶನ್‌ಗಳಲ್ಲಿ ಬರುತ್ತದೆ. ಲ್ಯಾಪ್‌ಟಾಪ್ ಎಫ್‌ಹೆಚ್‌ಡಿ ರೆಸಲ್ಯೂಶನ್ ಡಿಸ್‌ಪ್ಲೇಯೊಂದಿಗೆ ತೆಳ್ಳಗಿನ ಬೆಜೆಲ್ ವಿನ್ಯಾಸದೊಂದಿಗೆ ಹೆಚ್ಚಿನ […]

Advertisement

Wordpress Social Share Plugin powered by Ultimatelysocial