sslc ಪರೀಕ್ಷೆ ನಿರ್ಧಾರ ಬದಲಿಸಿ – ಸರ್ಕಾರಕ್ಕೆ ಹೆಚ್.ಡಿ.ಕೆ ಸಲಹೆ

ರಾಜ್ಯಾದ್ಯಂತ sslc ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸೋಕೆ ಮುಂದಾದರೆ,ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ ೨೪ ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡಿದಂತಾಗುತ್ತೆ ಎಂದು ಆರೋಪಿಸಿದ್ದಾರೆ. ನೆರೆಯ ತೆಲಂಗಾಣ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿಯಲ್ಲಿ ನಮ್ಮ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು. ಒಂದುವೇಳೆ ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಂತರ ಬೇಕಾದರೆ ಪರೀಕ್ಷೆ ನಡೆಸಲಿ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು. ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅಧಿಕಾರಿಗಳಿಂದ ಗುಡಿಸಲು ನೆಲಸಮ- ಸಚಿವರ ಕಾಲಿಗೆ ಬಿದ್ದ ಗರ್ಭಿಣಿ

Tue Jun 23 , 2020
ಗುಡಿಸಲನ್ನು ಅಧಿಕಾರಿಗಳು ಕಿತ್ತು ಹಾಕಿದ್ದಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಕಾಲಿಗೆ ತುಂಬು ಗರ್ಭಿಣಿ ಬಿದ್ದು ಕಣ್ಣೀರಿಟ್ಟ ಘಟನೆ ರಾಯಚೂರಿನ ಜಿಲ್ಲಾಪಂಚಾಯತ್ ಕಛೇರಿ ಮುಂದೆ ನಡೆದಿದೆ. ೨೦೦೯ರಲ್ಲಿ ಬಂದಿದ್ದ ಕೃಷ್ಣ ನದಿ ಪ್ರವಾಹಕ್ಕೆ ಸೂರು ಕಳೆದುಕೊಂಡು ಬೀದಿಗೆ ಬಿದ್ದ ಕುಟುಂಬಕ್ಕೆ ಇಂದಿಗೂ ಆಸರೆ ಒದಗಿಸದ ಅಧಿಕಾರಿಗಳ ವಿರುದ್ದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೆಚ್.ಸಿದ್ದಾಪುರ ಗ್ರಾಮದ ಗರ್ಭಿಣಿ ೨೦೦೯ರ ಸಮಯದಲ್ಲಿ ಪ್ರವಾಹಕ್ಕೆ ಸೂರು ಕಳೆದುಕೊಂಡು ಬೀದಿಗೆ ಬಿದ್ದಿದ್ದರು, ತದನಂತರ […]

Advertisement

Wordpress Social Share Plugin powered by Ultimatelysocial