‘SSLC’ , ‘PUC’ ಪಾಸಾದವರಿಗೆ ಭರ್ಜರಿ ಸಿಹಿಸುದ್ದಿ:Indian Army;

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ನಾಸಿಕ್​ನಲ್ಲಿರುವ ಇಂಡಿಯನ್‌ ಆರ್ಮಿ ಫಿರಂಗಿದಳದಲ್ಲಿ ಖಾಲಿಯಿರುವ ಕುಕ್, ಫೈರ್‌ಮ್ಯಾನ್ ಸೇರಿದಂತೆ ಒಟ್ಟು 107 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,, ಆಸಕ್ತ ಅಭ್ಯರ್ಥಿಗಳು ಜನವರಿ 22ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಇಲ್ಲಿ ಆಯಾ ಹುದ್ದೆಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯ ಶೇಕಡಾವಾರು ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು indianarmy.nic.in ನೀಡಲಾದ ಅರ್ಜಿ ನಮೂನೆಯನ್ನು ಪ್ರಿಂಟ್‌ ತೆಗೆದು ಅದರಲ್ಲಿ ಮಾಹಿತಿಗಳನ್ನು ತುಂಬಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಕಳುಹಿಸಬೇಕು. The Commandant, Headquarters, Artillery Centre, Nasik Road Camp PIN-422102′ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22-01-2022 ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

SSC CGL Exam 2021-2022 : ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ;

Fri Dec 31 , 2021
  ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2021ರ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಬಿ ಮತ್ತು ಗ್ರೂಪ್ ಸಿಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 23,2021 ರಿಂದ ಜನವರಿ 23,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. SSC CGL […]

Advertisement

Wordpress Social Share Plugin powered by Ultimatelysocial