SS ರಾಜಮೌಳಿಗೆ ಹೊಸ ತಲೆನೋವು: ”RRR” ಸಿನಿಮಾ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ;

ಹೈದರಾಬಾದ್: ‘RRR’ ಸಿನಿಮಾ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ಆಂಧ್ರಪ್ರದೇಶದ ವಿದ್ಯಾರ್ಥಿನಿ ಅಲ್ಲೂರಿ ಸೌಮ್ಯ ಅವರು ತೆಲಂಗಾಣ ಹೈಕೋರ್ಟ್‍ನಲ್ಲಿ ಎಸ್‍ಎಸ್ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘RRR’ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸಲ್ಲಿಸಿದ್ದಾರೆ.

ಈ ಸಿನಿಮಾದಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮ್ಮರಂ ಭೀಮ್ ಪಾತ್ರ ಬರುತ್ತದೆ.

ಈ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಈ ಸಿನಿಮಾದಲ್ಲಿ ತಿರುಚಲಾಗಿದೆ. ಹಾಗಾಗಿ ಈ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡಬಾರದು. ಅಷ್ಟೇ ಅಲ್ಲದೇ ‘RRR’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮ್ಮರಂ ಭೀಮ್ ಪಾತ್ರದಲ್ಲಿ ರಾಮ್ ಚರಣ್ ಮತ್ತು ಜೂನಿಯರ್ ಎನ್‍ಟಿಆರ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಜನವರಿ 7 ರಂದು ಬಿಡುಗಡೆಯಾಗಬೇಕಿತ್ತು, ಆದರೆ ಕೋವಿಡ್-19 ಪರಿಣಾಮ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುನೀತ್ 'ಗಂಧದಗುಡಿ' ಚಿತ್ರೀಕರಣ ಇನ್ನೂ ಮುಗಿದಿಲ್ಲ;

Fri Jan 7 , 2022
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕನಸಿನ ಕೂಸು ‘ಗಂಧದ ಗುಡಿ’. ಕರ್ನಾಟಕದ ಸೌಂದರ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲು ಅಪ್ಪು ಮುಂದಾಗಿದ್ದರು. ವೈಲ್ಡ್ ಲೈಫ್ ಛಾಯಾಗ್ರಾಹಕ ಅಮೋಘವರ್ಷ ಜೊತೆ ಸೇರಿ ಡಾಕ್ಯೂಮೆಂಟರಿ ಮಾಡಲು ಮಾಡಲು ಮುಂದಾಗಿದ್ದರು. ಇನ್ನೇನು ಕಿರು ಚಿತ್ರವನ್ನು ಬಿಡುಗಡೆ ಮಾಡಬೇಕು ಅಂತ ಪುನೀತ್ ರಾಜ್‌ಕುಮಾರ್ ಕನಸು ಕಂಡಿದ್ದರು. ಆದರೆ, ಅಷ್ಟರೊಳಗೆ ಅಪ್ಪು ಅಪಾರ ಅಭಿಮಾನಿಗಳನ್ನು ಬಿಟ್ಟು ಹೊರಟು ಹೋದರು. ಅಪ್ಪು ಕಂಡ ಈ ಕನಸನ್ನು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳಿಗೆ ತಲುಪಿಸಲು […]

Advertisement

Wordpress Social Share Plugin powered by Ultimatelysocial