ನಟಿ ರಚಿತಾ ರಾಮ್ ಬಂಧನಕ್ಕೆ ಒತ್ತಾಯ.

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ ಹಾಗೂ ರಚಿತಾ ರಾಮ್‌ ನಟನೆಯ ಕ್ರಾಂತಿ ಸಿನಿಮಾ ಜ.26ರಂದು ಬಿಡುಗಡೆಗೆ ಸಿದ್ದವಾಗಿದೆ. ಗಣರಾಜ್ಯೋತ್ಸವದಂದು ಬಿಡುಗಡೆಯಾಗುತ್ತಿರುವ ಚಿತ್ರಕ್ಕೆ, ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಚಿತ್ರದ ಪ್ರಚಾರವು ಅಬ್ಬರದಿಂದ ಸಾಗಿದೆ. ಸಾಮಾಜಿಕ ಮಾಧ್ಯಮ ಹಾಗೂ ಯುಟ್ಯೂಬ್‌ಗಳಲ್ಲಿ ಹೆಚ್ಚು ಪ್ರಚಾರ ಮಾಡಲಾಗುತ್ತಿದೆ. ಆದರೆ, ಈ ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರದ ನಾಯಕಿ ರಚಿತಾ ರಾಮ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ರಚಿತಾ ರಾಮ್‌ ಅವರು ನೀಡಿದ್ದ ಹೇಳಿಕೆಯೊಂದು ತೀವ್ರ ವಿವಾದ ಸೃಷ್ಟಿಸಿದೆ. ಕಳೆದ ವಾರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಅವರು, ಗಣರಾಜ್ಯೋತ್ಸವದ ಬಗ್ಗೆ ವಿವಾದಿತ ಮಾತೊಂದನ್ನು ಆಡಿದ್ದರು.

‘ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ, ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ. ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ’ ಎಂದು ನಟಿ ರಚಿತಾ ರಾಮ್‌ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ನೆಟ್ಟಿಗರು ರಚಿತಾ ರಾಮ್‌ ವಿರುದ್ಧ ಹರಿಹಾಯ್ದಿದ್ದರು. ಟ್ರೋಲ್‌ ಸಹ ಮಾಡಿದ್ದರು.

ಈ ದೇಶಕ್ಕಿಂತ ನಿಮ್ಮ ಚಿತ್ರ ದೊಡ್ಡದಲ್ಲ. ಅನಕ್ಷರಸ್ತೆ ತರ ಮಾತನಾಡಿ, ಗೌರವ ಕಳೆದುಕೊಳ್ಳಬೇಡಿ ಎಂದಿದ್ದರು. ನಿಮಗೆ ಈ ದೇಶದ ಮೇಲೆ ಗೌರವ ಇಲ್ಲದಿದ್ದರೆ, ಪಾಕಿಸ್ತಾನಕ್ಕೆ ಹೋಗಿ ಎಂದೂ ಅವರು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೇ ಹೇಳಿಕೆಗೆ ಸಂಬಂಧಿಸಿದಂತೆ ರಚಿತಾ ರಾಮ್‌ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ದೂರು ನೀಡಲಾಗಿದೆ.

ಭಾರತದ ಸಂವಿಧಾನಕ್ಕೆ ಹಾಗೂ ಗಣರಾಜ್ಯೋತ್ಸವಕ್ಕೆ ನಟಿ ರಚಿತಾ ರಾಮ್‌ ಅವರು ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲೇ ಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಒತ್ತಾಯಿಸಿದ್ದಾರೆ.

ನಟಿ ರಚಿತಾ ರಾಮ್‌ ಅವರ ಹೇಳಿಕೆ ದೇಶದ್ರೋಹದ ಹೇಳಿಕೆಯಾಗಿದೆ. ಅವರನ್ನು ಈ ದೇಶದಿಂದ ಗಡಿಪಾರು ಮಾಡಬೇಕು. ಅವರ ವಿವಾದಿತ ಹೇಳಿಕೆ ಹಿನ್ನೆಲೆಯಲ್ಲಿ ರಚಿತಾ ರಾಮ್‌ ವಿರುದ್ಧ ಮದ್ದೂರಿನ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಶಿವಲಿಂಗಯ್ಯ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಅಮೆರಿಕಾದ ಹಿಂದೂ ಹಿಂದೂ ದೇವಾಲಯದಲ್ಲಿ ಕಳ್ಳತನ.

Sat Jan 21 , 2023
ಹ್ಯೂಸ್ಟನ್‌: ಅಮೆರಿಕದ ಟೆಕ್ಸಾಸ್‌ನ ಬ್ರಾಸಸ್‌ ವ್ಯಾಲಿಯಲ್ಲಿನ ಹಿಂದೂ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಸ್ಥಾನದಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚಿದ್ದು, ಅಮೆರಿಕದ ಭಾರತೀಯ ಸಮುದಾಯಕ್ಕೆ ಆಘಾತ ಉಂಟುಮಾಡಿದೆ ಎಂದು ಇಲ್ಲಿಯ ಮಾಧ್ಯಮವೊಂದು ವರದಿ ಮಾಡಿದೆ. ಇಲ್ಲಿಯ ಶ್ರೀ ಓಂಕಾರನಾಥ ದೇವಾಲಯದಲ್ಲಿ ಜ. 11ರಂದು ಘಟನೆ ನಡೆದಿದೆ. ದೇವಸ್ಥಾನದ ಕಿಟಕಿಯನ್ನು ಮುರಿದು, ಹುಂಡಿ ಮತ್ತು ಬೆಲೆಬಾಳುವ ವಸ್ತುಗಳನ್ನಿಡುವ ಪೆಟ್ಟಿಗೆ ಕಳ್ಳತನ ಮಾಡಲಾಗಿದೆ. ದೇವಸ್ಥಾನದ ಹಿಂಬದಿಯಿರುವ ಅಪಾರ್ಟ್‌ಮೆಂಟ್‌ನಲ್ಲಿ ಅರ್ಚಕರು ವಾಸಿಸುತ್ತಾರೆ. ಅವರು ಕ್ಷೇಮದಿಂದಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial