ರಾಜ್ಯ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಹತ್ವದ ಬೆಳಗವಣಿಗೆ ಒಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಹಾಗೂ ಸುದೀಪ್ ಭೇಟಿ ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ.

ನ್ಯೂಸ್​ಫಸ್ಟ್​ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಚುನಾವಣಾ ಪ್ರಚಾರ ಸಭೆಗಳಿಗೆ ಬರುವಂತೆ ಸುದೀಪ್​ಗೆ ಡಿ.ಕೆ.ಶಿವಕುಮಾರ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ ಒಟ್ಟಿಗೆ ಭೋಜನ ಮಾಡಿ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಹಲವು ಕ್ಷೇತ್ರಗಳಲ್ಲಿ ವಾಲ್ಮೀಕಿ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಕಾರಣ ಸುದೀಪ್​​ರನ್ನು ಭೇಟಿ ಮಾಡಿದ್ದಾರೆ. ಈ‌ ಮೂಲಕ ವಾಲ್ಮೀಕಿ ಸಮುದಾಯದ ಮತಗಳನ್ನ ಸೆಳೆಯುವಲ್ಲಿ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್​ ಸೇರ್ತಾರಾ ಸುದೀಪ್..?
ಕಿಚ್ಚ ಸುದೀಪ್ ಕಾಂಗ್ರೆಸ್​ ಪಕ್ಷದ ಮೂಲಕ ರಾಜಕೀಯ ಜರ್ನಿ ಶುರುಮಾಡುತ್ತಾರೆ ಎಂಬ ವದಂತಿ ಇದೆ. ಈ ಗಾಳಿ ಸುದ್ದಿ ಬೆನ್ನಲ್ಲೇ, ಡಿಕೆ ಶಿವಕುಮಾರ್-ಸುದೀಪ್ ಭೇಟಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಧಾನಸಭೆಗೆ ಸ್ಪರ್ಧಿಸುವೆನೆಂದು ಪತ್ರ ಬರೆದ ಎಂಎಲ್‌ಸಿ ಆಯನೂರು ಮಂಜುನಾಥ್;‌

Fri Feb 3 , 2023
ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯರಾಗಿರುವ ಆಯನೂರು ಮಂಜುನಾಥ್ಅ ವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪದವೀಧರರಿಗೆ ಬಹಿರಂಗ ಪತ್ರ ಬರೆದು, ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನೂ ವಿವರಿಸಿದ್ದಾರೆ. ಈಗ ಇವರು ಶಿವಮೊಗ್ಗ ನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆನ್ನಲಾಗಿದ್ದು, ಹಾಲಿ ಶಾಸಕ, ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ  ಅವರಿಗೆ ಅಡ್ಡಗಾಲು ಹಾಕಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತದೆ. ವಿವಿಧ […]

Advertisement

Wordpress Social Share Plugin powered by Ultimatelysocial