ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ.

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಓಂಕಾರ ತಾಳಗುಪ್ಪ ಸಾಗರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸಾಗರದ ಗಾಂಧಿ ಮೈದಾನದಲ್ಲಿ ಗುರುವಾರ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ಏರ್ಪಡಿಸಿದ್ದ ಸಮಾವೇಶದಲ್ಲಿ ಸಿ.ಎಸ್.

ಷಡಾಕ್ಷರಿ ಭಾಷಣ ಮಾಡುವಾಗ, ನನಗೆ ಜೀವ ಬೆದರಿಕೆ ಹಾಕಿರುವುದಾಗಿ ಓಂಕಾರ ತಾಳಗುಪ್ಪ ದೂರು ನೀಡಿದ್ದಾರೆ. ತಾಲೂಕಿನ ಸರ್ಕಾರಿ ನೌಕರರಿಗೆ ತೊಂದರೆ ನೀಡಿದರೆ ನೀನು ಬದುಕುವುದು ಕಷ್ಟವಾಗುತ್ತದೆ ಎಂದು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿ.ಎಸ್. ಷಡಕ್ಷರಿ ಅವರು, ಭಾಷಣ ಮಾಡುವ ಸಂದರ್ಭದಲ್ಲಿ ಸರ್ಕಾರಿ ನೌಕರರು ಅಧಿಕಾರಿಗಳು ಕರ್ತವ್ಯ ಲೋಪವೆಸಗಿದರೆ ಸಂಬಂಧಿಸಿದ ವ್ಯಕ್ತಿ ಕಾನೂನು ಬದ್ಧವಾಗಿ ಪ್ರಶ್ನೆ ಮಾಡಲಿ. ಅದನ್ನು ಬಿಟ್ಟು ಬೆದರಿಕೆ ಹಾಕುವುದು ಬ್ಲಾಕ್ಮೇಲ್ ಮಾಡಿ ಕಿರುಕುಳ ನೀಡುವುದು ಸರಿಯಲ್ಲ. ಅದನ್ನು ಸಹಿಸುವುದಿಲ್ಲ ಎಂದು ಹೇಳಿದ್ದೇನೆ ಹೊರತೂ ಯಾವ ಬೆದರಿಕೆಯನ್ನು ಹಾಕಿಲ್ಲ. ವ್ಯಕ್ತಿಯ ವಿರುದ್ಧ ನಾವು ಎರಡು ದೂರು ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಅರಿವಿಗೆ ಸಮಾವೇಶ

Sat Jan 14 , 2023
ಅರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯವ್ಯಾಪ್ತಿ 22 ಜಿಲ್ಲೆಗಳಲ್ಲಿ ಜಾಗೃತಿ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜೆ. ಕೆನಡಿ ಶಾಂತಕುಮಾರ್ ಅವರು ತಿಳಿಸಿದರು.ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಲ್ಯಾಣ ಕಾರ್ಯಕ್ರಮಗಳ ಜಾಗೃತಿ ಮತ್ತು ಯೋಜನೆಗಳ ಅರಿವು ಮೂಡಿಸಲು ರಾಜ್ಯ ಪ್ರವಾಸ ಮಾಡಲಾಗುತ್ತಿದೆ ಎಂದರು.ಬೀದರ್, ಗುಲ್ಬರ್ಗ, ರಾಯಚೂರು, ಯಾದಗಿರಿ, […]

Advertisement

Wordpress Social Share Plugin powered by Ultimatelysocial