ಸಂವಿಧಾನ ಪೀಠಿಕೆ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತ ಸಂವಿಧಾನದ ಪೀಠಿಕೆಯ ಫಲಕ ಅಳವಡಿಸಲು ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತೆ ನಮ್ಮ ಸಂವಿಧಾನಕ್ಕೆ ಪೀಠಿಕೆ ಆತ್ಮವಾಗಿದೆ.

ವಿದ್ಯಾರ್ಥಿಗಳು ಸೇರಿದಂತೆ ದೇಶದ ಪ್ರತಿ ಪ್ರಜೆ ಭಾರತದ ಸಂವಿಧಾನದ ಆಶಯಗಳನ್ನು ಅರಿಯುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆ ಕೇಂದ್ರದಿಂದ ಸಂವಿಧಾನ ಪೀಠಿಕೆ ಖರೀದಿಸಿ ಕಾಲೇಜಿನಲ್ಲಿ ಫಲಕ ಪ್ರಕಟಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ. ಸಂವಿಧಾನದ ಅಮೃತ ಮಹೋತ್ಸವದ ಅಂಗವಾಗಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಚಿಕ್ಕಟ್ಟಿ ಕೃಷಿ ರೈತ ಉತ್ಪಾದಕರ ಸಂಘದ ವತಿಯಿಂದ ನೀಡಿದ ಪ್ರಸ್ತಾವನೆಯ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಮ್ಮ ದೇಶದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ.

Sat Jan 14 , 2023
ನವದೆಹಲಿ: ನಮ್ಮ ದೇಶದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ರಾಷ್ಟ್ರದ ಮೂಲೆ ಮೂಲೆಗಳಲ್ಲೂ ಪ್ರತಿಭಾವಂತರಿದ್ದಾರೆ. ಆದರೆ, ಅವಕಾಶ ಸೀಮಿತವಾಗಿದೆ. ಹೀಗಾಗಿ ಎಷ್ಟೋ ಪ್ರತಿಭೆಗಳು ಎಲೆಮರೆ ಕಾಯಿಯಂತಿದ್ದಾರೆ. ಆದರೆ, ಸಾಮಾಜಿಕ ಜಾಲತಾಣ ಪ್ರತಿಭೆಯನ್ನು ಪ್ರದರ್ಶಿಸಲು ಒಂದು ಉತ್ತಮ ವೇದಿಕೆಯಾಗಿದ್ದು, ಸಾಕಷ್ಟು ಪ್ರತಿಭೆಗಳು ಬೆಳಕಿಗೆ ಬರುತ್ತಿದ್ದಾರೆ. ಇದೀಗ ವ್ಯಕ್ತಿಯೊಬ್ಬ ತನ್ನ ಸುಮಧುರ ಗಾಯನದಿಂದ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. 24 ವರ್ಷದ ಯುವಕ ಜೈಲಿನಲ್ಲಿದ್ದುಕೊಂಡೇ ಹಾಡಿರುವ ಭೋಜ್‌ಪುರಿ ಹಾಡು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ, ಯುವಕನನ್ನು […]

Advertisement

Wordpress Social Share Plugin powered by Ultimatelysocial