ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ ಹೇಳಿಕೆ.

ಈ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ

ಕೃಷ್ಣಾ ನದಿ ವಿಚಾರದಲ್ಲಿ ಬಿಜೆಪಿಯವರು ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ

ಮೂರು ತಿಂಗಳ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ

ಕೃಷ್ಣಾ ಮೂರನೆಯ ಹಂತದ ಕಾಮಗಾರಿಗೆ ಪ್ರತಿ ವರ್ಷ 40ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ

ಇವತ್ತು ರಾಜ್ಯಕ್ಕೆ ಅಮಿತ್ ಷಾ ಬಂದಿದ್ದಾರೆ

ಅವರು ಕೃಷ್ಣಾ ಮತ್ತು ಮಹದಾಯಿ ನೀರಿನ ಬಗ್ಗೆ ಮಾತನಾಡಲ್ಲಾ

ಯಾಕಂದ್ರೆ ಅವರ ಮನಸ್ಸಲ್ಲಿ ಕಳ್ಳನಿದ್ದಾನೆ

ಅಮಿತ್ ಷಾ ಮತ್ತು ನರೇಂದ್ರ ಮೋದಿಯವರು ಕೃಷ್ಣಾ ಮತ್ತು ಮಹದಾಯಿ ನೀರಿನ ಹಕ್ಕಿನಿಂದ ಕರ್ನಾಟಕದ ಜನರನ್ನು ದೂರ ಇಟ್ಟಿದ್ದಾರೆ

ಕರ್ನಾಟಕದ ಜನರು ಅವರ ವಂಚನೆಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು

ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಯಾತ್ರೆಯ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ, ಮೂರು ತಿಂಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ

ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ಎಂಟು ವರ್ಷಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ

ಜನವರಿ 2ರಂದು ಹುಬ್ಬಳ್ಳಿಯಲ್ಲಿ ಮಹದಾಯಿಗಾಗಿ ಹೋರಾಟ ನಡೆಯಲಿದೆ

ಇದರ ಪರಿಣಾಮವಾಗಿ ಮೋಸಗಾರ ಬಿಜೆಪಿಯವರು ಒಂಟೆಯ ಬಾಯಲ್ಲಿ ಜೀರಿಗೆ ಹಾಕುವ ಕೆಲಸ ಮಾಡುತ್ತಿದ್ದಾರೆ

ಫಾರೆಸ್ಟ್ ಕ್ಲಿಯರೆನ್ಸ್, ಹಸಿರು ನ್ಯಾಯಾಧಿಕರಣದ ಕ್ಲಿಯರೆನ್ಸ್, ಕಾಮಗಾರಿ ಟೆಂಡರ್ ಎಲ್ಲಿದೆ?

ಬಿಜೆಪಿ ಸರ್ಕಾರ ಹೊರಟು ಹೋಗುವಾಗ ಇಲ್ಲಸಲ್ಲದ ಮಾತನಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ

ಮುಂದಿನ ಕಾಂಗ್ರೆಸ್ ಸರ್ಕಾರ ಮಹದಾಯಿಗೆ ಮೂರು ಸಾವಿರ ಕೋಟಿ ರೂಪಾಯಿ ಅನುದಾನ ಕೊಡಲಿದೆ.

ಮೊದಲ ಕ್ಯಾಬಿನೆಟ್‌ನಲ್ಲಿ ಐದು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡುತ್ತೇವೆ

ಇದು ಕಾಂಗ್ರೆಸ್ ಪಕ್ಷದ ಬದ್ಧತೆ, ದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಹೇಳಿಕೆ.

Fri Dec 30 , 2022
ಮಹದಾಯಿ ವಿಚಾರದಲ್ಲಿ ಬಿಜೆಪಿಯವ್ರು ಉತ್ತರ ಕರ್ನಾಟಕದ ಜನರಿಗೆ ದ್ರೋಹ, ಮೋಸ ಮಾಡುತ್ತಿದ್ದಾರೆ. ತ್ರಿಬಲ್ ಇಂಜಿನ್ ಸರ್ಕಾರ ಜನರಿಗೆ ನ್ಯಾಯ ಒದಗಿಸಬೇಕು. ಜನ ನಮಗೆ ಬೆಂಬಲ ನೀಡುತ್ತಾರೆ ಅಂತಾ ತರಾತುರಿಯಲ್ಲಿ ಡೇಟ್ ಇಲ್ಲದೆ ಇರುವ ಕಾಗದ ತೋರಿಸಿದ್ದಾರೆ. ರಾಜಕೀಯ ಲಾಭಕೊಸ್ಕರ ಸುಳ್ಳು ಹೇಳುತ್ತಿದ್ದಾರೆ.‌ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ, ಸುಳ್ಳು ಹೇಳಿ ಚಾಕಲೆಟ್ ಕೊಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡನೆ ತಾರೀಕು ನಮ್ಮ ಪ್ರತಿಭಟನೆ, ಜನರ ಧ್ವನಿ ಹೋರಾಟ ನಿಲ್ಲಲ್ಲ. ನಮ್ಮ […]

Advertisement

Wordpress Social Share Plugin powered by Ultimatelysocial