ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.

ಬೆಂಗಳೂರು:ಕರ್ನಾಟಕದ ಎಲ್ಲ ಶಿಕ್ಷಣ  ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.ಹಿಜಾಬ್   ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ.ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್  ಸ್ಪಷ್ಟಪಡಿಸಿದ್ದಾರೆ.ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು. ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಸರ್ಕಾರದ ನಿಲುವನ್ನು ಕೋರ್ಟ್​ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್​ಗೆ ಸೂಚಿಸಿದ್ದಾರೆ. ಹೈಕೋರ್ಟ್​ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.ಶಾಸಕರ ವಿರುದ್ಧ ಆರೋಪ ಸರಿಯಲ್ಲಇದೇ ವೇಳೆ ಉಡುಪಿ ಶಾಸಕ ರಘುಪತಿ ಭಟ್ ಅವರ ವಿರುದ್ಧ ವಿನಾಕಾರಣ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಅವರು ಶಿಕ್ಷಣ ವಂಚಿತ ಮಕ್ಕಳಿಗೆ ಸಮಸ್ಯೆಯಾಗದಂತೆ ಹಲವು ಕ್ರಮ ತೆಗೆದುಕೊಂಡಿದ್ದಾರೆ. ಎಸ್​ಡಿಎಂಸಿ ಅಧ್ಯಕ್ಷರಾಗಿ ಶಾಲೆ ಅಭಿವೃದ್ಧಿಪಡಿಸಿದ್ದಾರೆ. ಸ್ಕಾರ್ಫ್​ ವಿಚಾರದಲ್ಲಿ ಬಾಂಬೆ, ಕೇರಳ ಹೈಕೋರ್ಟ್​ಗಳು ಈಗಾಗಲೇ​ ತೀರ್ಪು ನೀಡಿವೆ. ಶಾಲೆಗಳಿಗೆ ಸ್ಕಾರ್ಪ್​ ಧರಿಸಿ ಬರಬಾರದು ಎಂದೇ ಹೇಳಿವೆ. ಶಾಲಾ ಕಾಲೇಜು ಸೋದರತ್ವ ಬೆಳೆಸಲು ಪೂರಕವಾಗಬೇಕು. ಮಕ್ಕಳು ಶಾಲೆಗೆ ಸೇರುವಾಗ ವಸ್ತ್ರಸಂಹಿತೆಯನ್ನು ಒಪ್ಪಿ ಸಹಿ ಹಾಕಿರುತ್ತಾರೆ. ಕಳೆದ ಒಂದೂವರೆ ವರ್ಷದಿಂದ ಸಮವಸ್ತ್ರ ಧರಿಸಿ ಬಂದಿದ್ದಾರೆ. ಇದೀಗ ಕೆಲವರಿಂದ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಶಾಸಕರು ಮತ್ತು ಮುಖಂಡರ ಜೊತೆ ಚರ್ಚೆ ನಡೆಸುತ್ತೇವೆ. ವಸ್ತ್ರಸಂಹಿತೆ ಪಾಲಿಸುವಂತೆ ಮತ್ತೆ ಸುತ್ತೋಲೆ ಹೊರಡಿಸುತ್ತೇವೆ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಶಿಕ್ಷಣ ಸಚಿವ ನಾಗೇಶ್​ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೆಡಕ್ಟಿವ್! ಅವನೀತ್ ಕೌರ್ ಅವರ ಹೈ-ಸ್ಲಿಟ್ ಬಟ್ಟೆಗಳು ನಿಮ್ಮ ಫ್ಯಾಷನ್ ಅಂಶವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ

Fri Feb 4 , 2022
    ಸೋನಿ ಎಸ್‌ಎಬಿಯಲ್ಲಿ ಪ್ರಸಾರವಾದ ಜನಪ್ರಿಯ ಸರಣಿ ಅಲ್ಲಾದೀನ್‌ನಲ್ಲಿ ಅವನೀತ್ ಕೊನೆಯದಾಗಿ ಯಾಸ್ಮಿನ್ ಪಾತ್ರದಲ್ಲಿ ಕಾಣಿಸಿಕೊಂಡರು. ಅವರು ದೊಡ್ಡ ಪರದೆಯ ಮೇಲೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಮುಂಬೈ: ಟೆಲಿ ಪ್ರಪಂಚದಿಂದ ಮತ್ತೊಂದು ಫ್ಯಾಷನ್ ಅಪ್‌ಡೇಟ್‌ನೊಂದಿಗೆ ಟೆಲಿಚಕ್ಕರ್ ಮರಳಿದೆ. ಶಾಕಿಂಗ್ ಅನ್ನು ಸಹ ಓದಿ! ಈ ಕಾರಣಕ್ಕಾಗಿ ಅವನೀತ್ ಕೌರ್ ಕ್ರೂರವಾಗಿ ಟ್ರೋಲ್ ಆಗುತ್ತಾಳೆ ಅವನೀತ್ ಕೌರ್ ಸಂಪೂರ್ಣ ಫ್ಯಾಷನಿಸ್ಟ್ ಮತ್ತು ವಿಭಿನ್ನ ಬಟ್ಟೆಗಳನ್ನು ಪ್ರಯೋಗಿಸಲು ಇಷ್ಟಪಡುತ್ತಾರೆ. Instagram ನಲ್ಲಿ […]

Advertisement

Wordpress Social Share Plugin powered by Ultimatelysocial