ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ…

ಮಂಗಳೂರು/ ಶಿವಮೊಗ್ಗ: ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೈಸೂರು, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನ (ಮೇ.19) ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗಳಿಗೂ ಆರೆಂಜ್‌ ಅಲರ್ಟ್‌ ಘೋಷಿಸಿದೆ. ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ...!

Thu May 19 , 2022
  ಮುಂಬೈ: ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್‌ ಕುಂದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ. ಅಶ್ಲೀಲ ಚಿತ್ರಗಳನ್ನು ನಿರ್ಮಿಸಿರುವ ಮತ್ತು ಅದನ್ನು ಕೆಲವು ಆಯಪ್‌ಗಳಲ್ಲಿ ಪ್ರಸಾರ ಮಾಡಿರುವ ಆರೋಪದಲ್ಲಿ ರಾಜ್‌ ಕುಂದ್ರಾ ಅವರನ್ನು ಕಳೆದ ವರ್ಷ ಫೆಬ್ರುವರಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ರಾಜ್‌ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ. ಸದ್ಯ ರಾಜ್‌ ಕುಂದ್ರಾ ಜಾಮೀನಿನ […]

Advertisement

Wordpress Social Share Plugin powered by Ultimatelysocial