ಸಾಲಬಾಧೆ ತಾಳಲಾರದೆ ಕಾಂಡಿಮೆಂಟ್ಸ್ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೈಸಾಲಕ್ಕೆ ಹೆದರಿ ಕಾಂಡಿಮೆಂಟ್ಸ್ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಳಾಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಕಾಲೋನಿಯ ಎಸ್ ವಿಎಸ್ ಕಾಂಡಿಮೆಂಟ್ಸ್ ಮಾಲೀಕ ಶಿವಕುಮಾರ್ 55 ವರ್ಷದ ವ್ಯಕ್ತಿಯೇ ಮೃತಪಟ್ಟ ದುರ್ದೈವಿ.ಇರಕಸಂದ್ರ ಕಾಲೋನಿಯ ಬಸ್ ನಿಲ್ದಾಣದಲ್ಲಿ ಕಾಂಡಿಮೆಂಟ್ಸ್ ಅಂಗಡಿಯ ವ್ಯಾಪಾರದಲ್ಲಿ ಕುಂಠಿತಗೊಂಡ ಹಿನ್ನೆಲೆಯಲ್ಲಿ ಕೈಸಾಲ ಮಾಡಿಕೊಂಡು ಕಳೆದ ಒಂದು ತಿಂಗಳಿಂದ ಅಂಗಡಿಯನ್ನ ಬಾಗಿಲು ಹಾಕಿದ್ದಾನೆ ಎಂದು ತಿಳಿದು ಬಂದಿದೆ.ಸಾಲ ತಿರಿಸಲು ಸಾಧ್ಯವಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ಧರಾಮೇಶ್ವರ ಪಿಎಸ್ಐ ಮಹಾಲಕ್ಷ್ಮಮ್ಮ ಬೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಖ್ಯಮಂತ್ರಿಗಳು ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

Sat Dec 18 , 2021
ಬೀದರ್ : ಬೆಳಗಾವಿ ನಗರದಲ್ಲಿ ಕೆಲ ಪುಂಡರು ಪುಂಡಾಟಿಕೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಮೂರ್ತಿಯನ್ನು ವಿರೂಪಗೊಳಿಸಿದ್ದಾರೆ ಹಾಗೂ ಸರ್ಕಾರಿ ವಾಹನಗಳು ಸೇರಿದಂತೆ ಅನೇಕ ವಾಹನಗಳನ್ನು ಜಖಂಗೊಳಿಸಿದ್ದಾರೆ. ಅಂಥ ಪುಂಡರ ವಿರುದ್ಧ ಮುಖ್ಯಮಂತ್ರಿಗಳು ಕೂಡಲೇ ಕಠಿಣ ಕ್ರಮ ಜರುಗಿಸಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು.ಖಾಶೆಂಪುರ್ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ […]

Advertisement

Wordpress Social Share Plugin powered by Ultimatelysocial