ರಾಜ್ಯ ರಾಜಕೀಯಕ್ಕೆ ಸುದೀಪ್

ರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.
ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ಗೆ ಕರೆತಂದು ಕಣಕ್ಕಿಳಿಸುವ ಪ್ರಯತ್ನಗಳು ನಡೆಯುತ್ತಿವೆ. ಇದೀಗ ಸರ್ಕಾರದ ವಿರುದ್ಧ ವಿವಿಧ ಅಭಿಯಾನಗಳ ಮೂಲಕ ಕಾಂಗ್ರೆಸ್ ವಿಶ್ವಾಸ ಹೆಚ್ಚಾಗಿದ್ದು, ಅದಕ್ಕೆ ಕಿಚ್ಚ ಸುದೀಪ್ ಬಲ ಸೇರಿದರೆ ಮತ್ತೂ ಶಕ್ತಿ ಸಿಗುತ್ತದೆ. ತಮ್ಮ ಸಿನಿಮಾಗಳ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುವ ಸಂದೇಶ ನೀಡುವ ಸುದೀಪ್, ಕಾಂಗ್ರೆಸ್ಗೆ ಆಗಮಿಸುವುದು ಒಳ್ಳೆಯದು ಎಂದು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಸುದೀಪ್ ಅವರನ್ನು ಕರೆತರು ಖ್ಯಾತ ಚಿತ್ರನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂಲಕ ಪ್ರಯತ್ನ ನಡೆಯುತ್ತಿದೆ.
ರಾಜ್ಯಾದ್ಯಂತ ಖ್ಯಾತ ನಟನಾಗಿ ಪ್ರಸಿದ್ಧಿಯಾಗಿರುವ ಸುದೀಪ್, ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂಬುದನ್ನೂ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ನಟಿ ರಮ್ಯಾ ಅವರು ಈಗಾಗಲೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯ ಬೃಹತ್ ಸಂಖ್ಯೆಯಲ್ಲಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬ್ಯಾಂಕ್'ನಲ್ಲಿ ನೇಮಕಾತಿ ̤

Tue Jan 10 , 2023
  ಕೆಎನ್‌ಎನ್ಡಿಜಿಟಲ್ ಡೆಸ್ಕ್ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI- State Bank of India) ದೇಶದ ಸಾರ್ವಜನಿಕ ವಲಯದ ಬ್ಯಾಂಕ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನ ಹೊರಡಿಸಿದೆ. ಸಹಾಯಕ ಮತ್ತು ಕಲೆಕ್ಷನ್ ಆಫೀಸರ್ ಹುದ್ದೆಗಳನ್ನ JMGS-1, MMGS- ಶ್ರೇಣಿಗಳ ಅಡಿಯಲ್ಲಿ ಆಯ್ಕೆ ಮಾಡಲಾಗುತ್ತಿದ್ದು, ಈ ಕೆಲಸಕ್ಕೆ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಿ. ಅದ್ರಂತೆ, ಈಗಾಗಲೇ ಬ್ಯಾಂಕಿಂಗ್ ಸೇವೆಯಿಂದ ನಿವೃತ್ತರಾದವರು ಮಾತ್ರ ಈ ಕೆಲಸಕ್ಕೆ ಅರ್ಜಿ ಸಲ್ಲಿಸಲು […]

Advertisement

Wordpress Social Share Plugin powered by Ultimatelysocial