ಕರ್ನಾಟಕದಲ್ಲಿ ಶೀಘ್ರವೇ 4 ಸರ್ಕಾರಿ ಮೆಡಿಕಲ್ ಕಾಲೇಜು ಆರಂಭ:

 

ಬೆಂಗಳೂರು, ಏಪ್ರಿಲ್ 29: ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜುಗಳು ಶೀಘ್ರದಲ್ಲಿ ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ.

ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ ಎಂದು ಹೇಳಿದರು.

ಖಾಸಗಿಯಲ್ಲಿ 3 ಹೆಚ್ಚುವರಿ ಮೆಡಿಕಲ್ ಕಾಲೇಜು
ಖಾಸಗಿಯಲ್ಲಿ 3 ಹೆಚ್ಚುವರಿ ಮೆಡಿಕಲ್ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜುಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.

ಬಿಎಂಸಿ ದೇಶದ ಹೆಮ್ಮೆ

ಬೆಂಗಳೂರು ಮೆಕಲ್ ಕಾಲೇಜು (ಬಿಎಂಸಿ) ದೇಶದ ಹೆಮ್ಮೆಯ ಕಾಲೇಜುಗಳುಗಳಲ್ಲಿ ಒಂದು. ಇಲ್ಲಿ ಪ್ರವೇಶ ಪಡೆಯುವ ಕನಸು ಹಲವು ವಿದ್ಯಾರ್ಥಿಗಳಿಗೆ ಇರುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅದೃಷ್ಟವಂತರಲ್ಲಿ ಅದೃಷ್ಟವಂತರು. ಅತ್ಯುತ್ತಮ ಸಂಸ್ಥೆಯಲ್ಲಿ ಕಲಿತ ಅನುಭವ ಜೊತೆಗೆ ಸಮಾಜದಲ್ಲಿ ವಿಭಿನ್ನ ಮತ್ತು ವಿಶಿಷ್ಟ ಗೌರವ ಸಿಗುತ್ತದೆ. ವೈದ್ಯರಿಗೆ ಸಮಾಜದ ಎಲ್ಲಾ ಕಡೆಯೂ ವಿಶಿಷ್ಟ ಗೌರವ ಇದೆ. ವೈದ್ಯ ವಿದ್ಯಾರ್ಥಿಗಳು, ಪದವಿ ಪಡೆದವರು ಈ ಸಮಾಜದ ಹೆಮ್ಮೆ ಎಂದು ತಿಳಿಸಿದರು.

ಪ್ರತಿ ವರ್ಷ 65,000 ಎಂಬಿಬಿಎಸ್ ಡಾಕ್ಟರ್‌ಗಳು

ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜಿಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150 ಕ್ಕೂ ಅಧಿಕ ಮೆಡಿಕಲ್ ಕಾಲೇಜುಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್ ಗಳು ಪ್ರತೀ ವರ್ಷ ಹೊರ ಬರುಯತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ಹೇಳಿದರು.

ಭಾರತ ವೈದ್ಯಕೀಯ ವಿಜ್ಞಾನಕ್ಕೆಅದ್ಭುತ ಇತಿಹಾಸವಿದೆ. ಆಯುರ್ವೇದದಲ್ಲಿ ಚರಕ, ಶುಶ್ರೂತರ ಕೊಡುಗೆ ಅಮೂಲ್ಯವಾದದ್ದು. ಬಿಎಂಸಿ ಕೂಡ ಕೇವಲ ವೈದ್ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿಲ್ಲ. ಬದಲಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಡೆಗೂ ಗಮನ ಹರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದ ವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದರು.

ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

ಉಚಿತ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ

‘ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಶೂಟಿಂಗ್ ವೇಳೆ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ.

Sat Apr 30 , 2022
ಮೈಸೂರು, ಏಪ್ರಿಲ್ 29: ತೆಲುಗು ನಟ ಗೋಪಿಚಂದ್ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣವನ್ನು ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸುತ್ತಿದ್ದು, ಶೂಟಿಂಗ್ ವೇಳೆ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ. ಶುಕ್ರವಾರ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿದ್ದರಿಂದ ಅಲ್ಪ ಪ್ರಮಾಣದ ಗಾಯವಾಗಿದ್ದು, ಹಾಗಾಗಿ ಚಿತ್ರದ ಚಿತ್ರೀಕರಣವು ಇಂದು ಸ್ಥಗಿತಗೊಂಡಿದೆ. ಇನ್ನು ಈ ಕುರಿತು ಚಲನಚಿತ್ರ ಘಟಕ ಪ್ರತಕ್ರಿಯಿಸಿದ್ದು, ನಟ ಗೋಪಿಚಂದ್ ಚೆನ್ನಾಗಿದ್ದಾರೆ. ಘಟನೆಯ ಬಗ್ಗೆ ಚಿಂತಿಸಬೇಡಿ […]

Advertisement

Wordpress Social Share Plugin powered by Ultimatelysocial