ಅಧಿಕಾರಕ್ಕೆ ಬಂದೇಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್!

ಬೆಂಗಳೂರು,ಏ.18- ಅಧಿಕಾರಕ್ಕೆ ಬಂದೇಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರ ಜೊತೆ ಕೆಲ ಹಿತಶತ್ರುಗಳು ಕೈ ಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲ ಮಾಹಿತಿ ಇದೆ.

ಇವರ ಮುಖವಾಡಗಳನ್ನು ಕಳಚಿ ಬೆತ್ತಲು ಮಾಡುವ ದಿನ ದೂರವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಒಳ್ಳೆ ಕೆಲಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲು ಕಾಂಗ್ರೆಸ್‍ಗೆ ಯಾವ ನೈತಿಕತೆ ಇದೆ. ಹಗರಣಗಳ ಭೂತವನ್ನು ಬೆನ್ನಿಗೆ ಕಟ್ಟಿಕೊಂಡಿರುವ ಇವರ ಬಯಲಾಟವನ್ನು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇನ್ನಾದರೂ ರಚನಾತ್ಮಕ ಚಟುವಟಿಕೆಗಳ ಮೂಲಕ ಜನರ ಮುಂದೆ ಹೋಗಲಿ ಎಂದು ಹೇಳಿದ್ದಾರೆ.

ಇತ್ತೀಚೆಗೆ ಸುಳ್ಳುಗಳ ಕಂತೆಯನ್ನೇ ಸತ್ಯ ಎಂದು ಬಿಂಬಿಸುವ ರಾಜಕೀಯ ದೊಂಬರಾಟ ರಾಜ್ಯದಲ್ಲಿ ನಡೆಯುತ್ತಿದೆ. ಆಧಾರ ರಹಿತ, ದಾಖಲೆಗಳೇ ಇಲ್ಲದ ಆರೋಪಗಳ ಮೂಲಕ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಮತ್ತು ಸಚಿವರ ತೇಜೋವಧೆ ಮಾಡುವ ಹುನ್ನಾರ ನಡೆದಿದೆ.ಇದಕ್ಕಾಗಿ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದರು.

ಆರ್‍ಟಿಐ ಕಾರ್ಯಕರ್ತರ ಸೋಗಿನಲ್ಲಿರುವ ಕೆಲವರ ಮೂಲಕ ದೂರುಗಳನ್ನು ಕೊಡಿಸಿ ದೊಡ್ಡ ಹಗರಣ, ಭ್ರಷ್ಟಾಚಾರ ನಡೆದಿದೆ ಎಂದು ಬಿಂಬಿಸುವ ಕಸರತ್ತು ನಡೆಯುತ್ತಿದೆ. ಇವರ ಆರೋಪಗಳಲ್ಲಿ ಸತ್ಯಾಂಶ ಇದ್ದಲ್ಲಿ, ದಾಖಲೆಗಳು ಇದ್ದಲ್ಲಿ ಎಸಿಬಿ, ಲೋಕಾಯುಕ್ತ ಇಲ್ಲವೇ ಕೋರ್ಟ್‍ಗಳಿಗೆ ದೂರು ನೀಡಬಹುದು. ಆದರೆ ಇವರಿಗೆ ಸತ್ಯ ಬೇಕಾಗಿಲ್ಲ. ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುವುದು ಇವರ ಏಕೈಕ ಉದ್ದೇಶ ಎಂದು ಟೀಕಿಸಿದರು.

ಪ್ರತಿಭಟನೆ ಹೆಸರಿನಲ್ಲಿ ಪ್ರತಿದಿನ ಬೀದಿ ನಾಟಕ ಆಡುತ್ತಿದ್ದಾರೆ. ಹಿಂದೆ ಇವರು ಅಧಿಕಾರದಲ್ಲಿದ್ದಾಗ ಹಗರಣಗಳ ಕೆಸರಿನಲ್ಲೇ ಮುಳುಗಿ ಹೋಗಿದ್ದರು. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ಈಗ ಬೇರೆಯವರ ತಟ್ಟೆಯಲ್ಲಿ ನೋಣ ಹುಡುಕುವ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ.

ಬಿಜೆಪಿ ಸರರ್ಕಾರ ಬಂದು ಮೂರು ವರ್ಷ ಕಾಂಗ್ರೆಸ್ ನಾಯಕರು ನಿದ್ರಾವಸ್ಥೆಯಲ್ಲಿದ್ದರು. ಚುನಾವಣೆಗೆ ಇನ್ನೇನು ಒಂದು ವರ್ಷ ಇದೆ ಅನ್ನುವಾಗ ಹೇಗಾದರೂ ಅಧಿಕಾರಕ್ಕೆ ಬರಬೇಕು ಎಂದು ಇಂಥ ವಾಮಮಾರ್ಗ ಹಿಡಿದಿದ್ದಾರೆ.

ಮೌಲ್ಯಾಧಾರಿತ ರಾಜಕಾರಣಕ್ಕೆ, ಆರೋಗ್ಯಕರ ಸ್ಪರ್ಧೆಗೆ ಕರ್ನಾಟಕ ದೇಶಕ್ಕೆ ಮಾದರಿಯಾಗಿತ್ತು. ಕೀಳು ಮಟ್ಟದ ಕುತಂತ್ರಿ ರಾಜಕಾರಣದ ಮೂಲಕ ಅಂತಹ ಉನ್ನತ ಪರಂಪರೆಗೆ ಕಾಂಗ್ರೆಸ್ ನಾಯಕರು ತಿಲಾಂಜಲಿ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಕ್ಕೆ ಬಂದೆ ಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರ ಜತೆ ಕೆಲ ಹಿತಶತ್ರುಗಳು ಕೈಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲ ಮಾಹಿತಿಯಿದೆ. ಇವರ ಮುಖವಾಡಗಳನ್ನು ಕಳಚಿ ಬೆತ್ತಲು ಮಾಡುವ ದಿನ ದೂರವಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣದ ತನಿಖೆಗೆ ಖಡಕ್ ಪೊಲೀಸ್ ಅಧಿಕಾರಿ ಪ್ರತಾಪ್ ರೆಡ್ಡಿ

Mon Apr 18 , 2022
  ಬೆಂಗಳೂರು, ಏ. 16: ಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣದ ತನಿಖೆಗೆ ಖಡಕ್ ಪೊಲೀಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಯಾವುದೇ ಸಣ್ಣ ಸುಳಿವೂ ಇಲ್ಲ ಪ್ರಕರಣಗಳನ್ನು ಪತ್ತೆ ಮಾಡುವ ಮೂಲಕ ಹೆಸರಾಗಿರುವ ಎಡಿಜಿಪಿ ಪ್ರತಾಪ್ ರೆಡ್ಡಿ ಅವರು ಸಂತೋಷ್ ಪಾಟೀಲ್ ಪ್ರಕರಣದ ತನಿಖೆಗೆ ಎಂಟ್ರಿ ಕೊಟ್ಟಿದ್ದಾರೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದಿತ್ತು. ಪ್ರತಿಪಕ್ಷಗಳ ಹೋರಾಟದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

Advertisement

Wordpress Social Share Plugin powered by Ultimatelysocial