ಮೇ 1 ರಂದು ಕಾರ್ಮಿಕರ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗಿದೆ.

ಕಾರ್ಮಿಕರ ದಿನಾಚರಣೆ ಅಂಗವಾಗಿ ಕೆಲವೊಂದು ಸಂಸ್ಥೆಗಳು ಕೊಡುಗೆಗಳನ್ನು ಸಹ ನೀಡಿವೆ.

ಇದರ ಮಧ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಆಲಳ್ಳಿಯಲ್ಲಿ ವ್ಯಕ್ತಿಯೊಬ್ಬರು ವಿಶಿಷ್ಟವಾಗಿ ಕಾರ್ಮಿಕ ದಿನಾಚರಣೆ ಆಚರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿ ಕಬ್ಬಿನ ಹಾಲು ವ್ಯಾಪಾರ ಮಾಡುವ ಪುಟ್ಟಪ್ಪ ಬಲೆಗಾರು ಅವರು ಮೇ 1ರ ಭಾನುವಾರದಂದು ಕಾರ್ಮಿಕರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತವಾಗಿ ಕಬ್ಬಿನ ಹಾಲು ವಿತರಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪ್ರತಿನಿತ್ಯ ದುಡ್ಡು ಪಡೆದು ಕಬ್ಬಿನ ಹಾಲು ಮಾರಾಟ ಮಾಡುವ ನಾನು ವರ್ಷಕ್ಕೆ ಒಂದು ದಿನ ಉಚಿತವಾಗಿ ಕಬ್ಬಿನ ಹಾಲು ನೀಡಿದರೆ ಮನಸ್ಸಿಗೆ ಸಂತೋಷವಾಗುತ್ತದೆ. ಪ್ರತಿವರ್ಷವೂ ಕಾರ್ಮಿಕರ ದಿನವಾದ ಮೇ1ರಂದು ಇದನ್ನು ಮಾಡಿಕೊಂಡು ಬಂದಿದ್ದು, ಈ ಬಾರಿ 600 ಜನರು ಕಬ್ಬಿನ ಹಾಲು ಕುಡಿದಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ.

Mon May 2 , 2022
ಬೆಂಗಳೂರು: ಉತ್ತರ ಭಾರತದಲ್ಲಿ ದಾಖಲೆಯ ಬಿಸಿಲು, ಬಿಸಿ ಗಾಳಿಯಿಂದ ಜನ ತತ್ತರಿಸಿದ್ದು, ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಭಾನುವಾರ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಬಿಡದಿಯಲ್ಲಿ ಸಿಡಿಲು ಬಡಿದು 10 ಕುರಿ, 6 ಮೇಕೆ ಸಾವನ್ನಪ್ಪಿವೆ. ಮೈಸೂರು ಭಾಗದಲ್ಲಿ ಮಳೆ ಮುಂದುವರೆದಿದ್ದು, ಮಂಡ್ಯ ಜಿಲ್ಲೆ ಪಾಂಡವಪುರ […]

Advertisement

Wordpress Social Share Plugin powered by Ultimatelysocial