ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ!

 

ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಅವರನ್ನು ಅಖಾಡಕ್ಕೆ ಇಳಿಸಲು ಪ್ಲಾನ್ ಮಾಡಿರುವ ಸುಮಲತಾ, ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಕಾಂಗ್ರೆಸ್, ಮದ್ದೂರಿನಿಂದ ಎಸ್.ಎಂ. ಕೃಷ್ಣ ಸಹೋದರನ ಮಗನಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಗುರುಚರಣ್ ಗೆ ಟಿಕೆಟ್ ನೀಡುವುದಾಗಿ ಡಿ.ಕೆ. ಶಿವಕುಮಾರ್ ಕೂಡ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಸುಮಲತಾ, ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿದ್ದು, ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದೇಶಾದ್ಯಂತ 18-59 ವರ್ಷ ವಯಸ್ಸಿನ ಶೇ.86 ಕ್ಕಿಂತ ಹೆಚ್ಚಿನ ಜನರಿಗೆ ಸಂಪೂರ್ಣವಾಗಿ ಕರೋನಾ ಲಸಿಕೆ!

Wed Apr 27 , 2022
   ಕರೋನಾ ಲಸಿಕೆ ಹಾಕಲಾಗಿದ್ದು, ದೇಶದಲ್ಲಿ ನೀಡಲಾದ ಲಸಿಕೆ ಪ್ರಮಾಣಗಳ ಸಂಖ್ಯೆ 188 ಕೋಟಿ ದಾಟಿದೆ. ಮಂಗಳವಾರದವರೆಗೆ ಸುಮಾರು 19 ಲಕ್ಷಕ್ಕೂ ಹೆಚ್ಚಿನ (19,67,717) ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದಾರೆ. ಮಂಗಳವಾರ 18-59 ವರ್ಷ ವಯಸ್ಸಿನ ಸುಮಾರು 46,044 ಜನರಿಗೆ ಕೋವಿಡ್ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ. ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಈ ವಯಸ್ಸಿನ ಗುಂಪಿಗೆ ನೀಡಲಾದ ಒಟ್ಟು ಕರೋನಾ […]

Advertisement

Wordpress Social Share Plugin powered by Ultimatelysocial