ಮೋದಿ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿಗೆ?

ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಸೆಳೆಯಲು ಈಗಾಗಲೇ ರಾಜ್ಯ ನಾಯಕರು ಹೈಕಮಾಂಡ್​ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಾರ್ಚ್ 12ರಂದು ಗೆಜ್ಜಲಗೆರೆ ಬಳಿ ನಡೆಯಲಿರುವ ಸಮಾವೇಶದಲ್ಲಿ ಅವರು ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಸೆಳೆಯಲು ಈಗಾಗಲೇ ರಾಜ್ಯ ನಾಯಕರು ಹೈಕಮಾಂಡ್​ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿರುವ ಗೆಜ್ಜಲಗೆರೆ ಬಳಿಯಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ  ಅವರು ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿದ ಕೇಂದ್ರ ಸಚಿವಪ್ರಧಾನಿ ಕಾರ್ಯಕ್ರಮದಲ್ಲಿ ಯಾರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮ ಇರುವುದಿಲ್ಲ ಎಂದರು. ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಮಾತನಾಡಿದ ಜೋಶಿ, ಸೂಕ್ತ ಸಮಯದಲ್ಲಿ ನಿಮಗೆ ಎಲ್ಲಾ ವಿಷಯ ತಿಳಿಸಲಾಗತ್ತದೆ ಎಂದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದ್ದು, ಆ ಭಾಗದ ಕಾಂಗ್ರೆಸ್, ಜೆಡಿಎಸ್​ನ ಕೆಲ ಮುಖಂಡರಿಗೆ ಗಾಳ ಹಾಕುತ್ತಿದೆ. ಈ ಪಟ್ಟಿಯಲ್ಲಿ ಸುಮಲತಾ ಅಂಬರೀಶ್​ ಸಹ ಇದ್ದಾರೆ ಎನ್ನಲಾಗಿದೆ. ಇನ್ನು ಸುಮಲತಾ ಅಂಬರೀಶ್ ಅವರು ಬಿಜೆಪಿ ಬಾಗಿಲಲ್ಲಿ ಇದ್ದಾರೆ ಎನ್ನುವುದಕ್ಕೆ ಸ್ವತಃ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸುಳಿವು ಕೊಟ್ಟಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಜಯಭಾಸ್ಕರ್ ಮಹಾನ್ ಸಂಗೀತ ನಿರ್ದೇಶಕ.

Fri Mar 3 , 2023
  ಮಹಾನ್ ಸಂಗೀತ ನಿರ್ದೇಶಕ ವಿಜಯಭಾಸ್ಕರ್ ಅವರ ಸಂಸ್ಮರಣಾ ದಿನವಿದು. ಈ ಮಹಾನ್ ಸಂಗೀತ ಸಂಯೋಜಕರು 2002ರ ಮಾರ್ಚ್ 3ರಂದು ಈ ಲೋಕವನ್ನಗಲಿದರು.ವಿಜಯಭಾಸ್ಕರ್ ಅವರು ಜನಿಸಿದ್ದು 1931ರ ಸೆಪ್ಟೆಂಬರ್ 7ರಂದು.’ಮೂಡಲ ಮನೆಯ ಮುತ್ತಿನ ನೀರಿನ’, ‘ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ’, ‘ಬೆಳ್ಳಿ ಮೋಡದ ಅಂಚಿನಿಂದ ಮೂಡಿಬಂದ ಮಿನುಗುತಾರೆ’, ‘ಹಾಡೊಂದ ಹಾಡುವೆ ನೀ ಕೇಳೋ ಮಗುವೆ’, ‘ನಿನ್ನೊಲುಮೆ ನಮಗಿರಲಿ ತಂದೆ’, ‘ಹಾವಿನ ದ್ವೇಷ ಹನ್ನೆರಡು ವರುಷ’, ‘ಭಾವವೆಂಬ ಹೂವು ಅರಳಿ’, ‘ವೇದಾಂತಿ […]

Advertisement

Wordpress Social Share Plugin powered by Ultimatelysocial