ರಾಜ್ಯದಲ್ಲಿ ಶಿವರಾತ್ರಿಗೂ ಮುನ್ನವೇ ಬೇಸಿಗೆ ಬೇಗೆ ಶುರುವಾಗಿದೆ.

ಬೆಂಗಳೂರು : ರಾಜ್ಯದಲ್ಲಿ ಶಿವರಾತ್ರಿಗೂ ಮುನ್ನವೇ ಬೇಸಿಗೆ ಬೇಗೆ ಶುರುವಾಗಿದ್ದು, ವಾಡಿಕೆಗಿಂತ ಮುನ್ನವೇ ಬೇಸಿಗೆ ಆರಂಭವಾಗಿದೆ. ಬಿಸಿಲ ಬೇಗೆಗೆ ಜನರು ತತ್ತರಿಸಿದ್ದಾರೆ.

ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ.

ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಡಿಕೇರಿಯಲ್ಲಿ ಗರಿಷ್ಠ 30 ಡಿಗ್ರಿ ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಸ್ಪೋರ್ಟ್ ಮಾಡಿಸಿಕೊಳ್ಳಲು ಬಯಸುವವರಿಗೆ ಹೊಸ ಸೇವೆಯನ್ನು ಆರಂಭಿಸಲಾಗಿದೆ.

Sat Feb 18 , 2023
ಪಾಸ್ಪೋರ್ಟ್ ಮಾಡಿಸಿಕೊಳ್ಳಲು ಬಯಸುವವರಿಗೆ ಹೊಸ ಸೇವೆಯನ್ನು ಆರಂಭಿಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ mPassport Seva ಎಂಬ ಹೊಸ ಸೌಲಭ್ಯಕ್ಕೆ ಚಾಲನೆ ನೀಡಿದ್ದಾರೆ. ಪಾಸ್ಪೋರ್ಟ್ ಮಾಡಿಸಿಕೊಳ್ಳಲು ಬಯಸುವವರಿಗೆ ಹೊಸ ಸೇವೆಯನ್ನು ಆರಂಭಿಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ mPassport Seva ಎಂಬ ಹೊಸ ಸೌಲಭ್ಯಕ್ಕೆ ಚಾಲನೆ ನೀಡಿದ್ದಾರೆ. ಇದರ ಅಡಿಯಲ್ಲಿ ಈಗ ಪಾಸ್ಪೋರ್ಟ್ ಪರಿಶೀಲನೆ ಕೇವಲ 5 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಹಿಂದಿನ ಜನರು ಪರಿಶೀಲನೆಗಾಗಿ ಬಹಳ ಸಮಯ ಕಾಯಬೇಕಾಗಿತ್ತು. ಆದರೆ […]

Advertisement

Wordpress Social Share Plugin powered by Ultimatelysocial