ಅಭಿನಂದನ್ ಸಂಸ್ಥೆಯಿಂದ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಸ್ಥಳೀಯ ಅಭಿನಂದನ್ ಸಂಸ್ಥೆಯು ಆರಂಬಿಸಿದ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ 24 ನೇ ವಾರದ ಸೇವಾ ಕಾರ್ಯವನ್ನು ಮಸ್ಕಿಯ ವಿಶ್ವ ಪ್ರಸಿದ್ಧ ಐತಿಹಾಸಿಕ ಖ್ಯಾತಿಯನ್ನು ಹೊಂದಿದ ಅಶೋಕ ಶಿಲಾಶಾಸನದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.ಶಾಸನದ ಆವರಣದಲ್ಲಿ ತಮ್ಮ ಸಿಬ್ಬಂದಿಯೊಂದಿಗೆಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ಮಾಡಲಾಯಿತು.ಇದೇ ಸಂದರ್ಭದಲ್ಲಿ ಮಾತನಾಡಿದ ಸಂಡೇ ಫಾರ್ ಸೋಶಿಯಲ್ ವರ್ಕ್ ನ ರುವಾರಿಗಳಾದ ರಾಮಣ್ಣ ಹಂಪರಗುಂದಿ ಅವರು ಮಸ್ಕಿಯನ್ನು ಸುಂದರ ನಗರವನ್ನಾಗಿ ಹಾಗೂ ಭಾರತವನ್ನು ಸ್ವಚ್ಛ ಭಾರತವನ್ನಾಗಿ ಮಾಡುವ ಕನಸಿನಿಂದ ಆರಂಭವಾದ ಈ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದಲ್ಲಿ ಭಾಗಹಿಸುವ ಇಚ್ಛೆ ಉಳ್ಳವರು ಪ್ರತಿ ಭಾನುವಾರ ತಮ್ಮ ಸುತ್ತ ಮುತ್ತಲಿನ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಿ ಅದರ ಫೋಟೋ ಹಾಗೂ ವೀಡಿಯೋಗಳನ್ನು ನಮಗೆ ಕಳುಹಿಸಿ ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂಇಎಸ್ ನಿಷೇಧಕ್ಕೆ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯ

Mon Dec 20 , 2021
ಬೆಳಗಾವಿ ನಗರದಲ್ಲಿ ಪೊಲೀಸ್ ವ್ಯವಸ್ಥೆ, ಸರ್ಕಾರದ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ.ಆದರೆ ನಂತರದ ಬೆಳವಣಿಗೆಯಲ್ಲಿ ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು […]

Advertisement

Wordpress Social Share Plugin powered by Ultimatelysocial