ರಾಜ್ಯದ ಶಾಲಾ-ಕಾಲೇಜುಗಳಲ್ಲಿನ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು!

ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿನ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಯೂಥ್ ಕಾಂಗ್ರೆಸ್ ಸರ್ವೋಚ್ಛ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದೆ.ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಮೂಲಭೂತ ಹಕ್ಕಾಗಿದ್ದು, ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದಂತೆ ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ. ಸಮವಸ್ತ್ರ ಕಡ್ಡಾಯ ಎಂದು ಆದೇಶ ನೀಡಿದೆ. ಇದರ ಬೆನ್ನಲ್ಲೇ ಇದೀಗ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ODI:'ನಾನು ನಿರಂತರವಾಗಿ ಏಕದಿನ ಪಂದ್ಯಗಳನ್ನು ಆಡುತ್ತಿದ್ದೆ, ಇದ್ದಕ್ಕಿದ್ದಂತೆ ಕೈಬಿಡಲಾಯಿತು' - ಅಜಿಂಕ್ಯ ರಹಾನೆ;

Fri Feb 11 , 2022
2021 ರಲ್ಲಿ, 33 ವರ್ಷದ ಅವರು 13 ಟೆಸ್ಟ್‌ಗಳಲ್ಲಿ 20.83 ಸರಾಸರಿಯಲ್ಲಿ ಕೇವಲ 479 ರನ್ ಗಳಿಸಿದರು. ಇದರ ಪರಿಣಾಮವಾಗಿ, ಅವರು ಆಟದ ಸುದೀರ್ಘ ಸ್ವರೂಪದಲ್ಲಿ ಭಾರತದ ಉಪನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟರು. ಸೈಡ್‌ನಲ್ಲಿರುವ ಅವರ ಸ್ಥಳವೂ ಸ್ಕ್ಯಾನರ್ ಅಡಿಯಲ್ಲಿ ಬಂದಿದೆ. 2022 ರಲ್ಲಿ, ರಹಾನೆ ದಕ್ಷಿಣ ಆಫ್ರಿಕಾದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದರು ಮತ್ತು ಹೆಚ್ಚು ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಅವರು ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಸೇರಿದಂತೆ 68 ರನ್ […]

Advertisement

Wordpress Social Share Plugin powered by Ultimatelysocial