ಮುಕೇಶ್ ಅಂಬಾನಿಗೆ ಸಂಬಂಧಿಸಿ ತ್ರಿಪುರಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಹೊಸದಿಲ್ಲಿ: ಮುಂಬೈನಲ್ಲಿರುವ ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ನೀಡಿರುವ ಭದ್ರತೆಗೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಕಡತಗಳನ್ನು ಸಲ್ಲಿಸುವಂತೆ ತ್ರಿಪುರಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ರಜಾಕಾಲದ ಪೀಠವು ಹೈಕೋರ್ಟ್‌ನ ಆದೇಶಗಳನ್ನು ಪ್ರಶ್ನಿಸಿ ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಮಧ್ಯಂತರ ಆದೇಶ ನೀಡಿದೆ.

ಕೇಂದ್ರದ ಪರವಾಗಿ ವಾದ ಮಂಡಿಸಿದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ತ್ರಿಪುರಾ ಹೈಕೋರ್ಟ್‌ಗೆ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಪ್ರಾದೇಶಿಕ ನ್ಯಾಯವ್ಯಾಪ್ತಿಯ ಕೊರತೆಯಿದೆ. ವ್ಯಕ್ತಿಗಳಿಗೆ ನೀಡಲಾದ ಭದ್ರತಾ ರಕ್ಷಣೆಯು ನ್ಯಾಯಾಂಗ ಪರಿಶೀಲನೆಯ ವಿಷಯವಾಗಿರಬಾರದು ಎಂದು ಹೇಳಿದರು. ಹೈಕೋರ್ಟ್ ಆದೇಶಗಳಿಗೆ ತಡೆಯಾಜ್ಞೆ ನೀಡುವಂತೆಯೂ ಕೋರಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಮಗೆ ಎರಡು ಗಂಡು ಮಕ್ಕಳು ಬೇಕು ಎಂದ ಆಲಿಯಾ ಭಟ್,

Wed Jun 29 , 2022
ಮೊನ್ನೆಯಷ್ಟೇ ತಾನು ಮಗುವಿನ ನಿರೀಕ್ಷೆಯಲ್ಲಿದ್ದೇನೆ ಎಂದು ಬಹಿರಂಗಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದ ಆಲಿಯಾ ಭಟ್, ಇದೀಗ ಮತ್ತೊಂದು ಬೇಡಿಕೆಯನ್ನು ಪತಿ ರಣಬೀರ್ ಕಪೂರ್ ಮುಂದೆ ಇಟ್ಟಿದ್ದಾರೆ. ತಮಗೆ ಎರಡು ಗಂಡು ಮಕ್ಕಳು ಬೇಕು ಎನ್ನುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಮದುವೆಯಾಗಿ 57ನೇ ದಿನಕ್ಕೆ ತಾವು ತಾಯಿ ಆಗುತ್ತಿರುವುದಾಗಿ ಆಲಿಯಾ ಭಟ್ ತಿಳಿಸುತ್ತಿದ್ದಂತೆಯೇ ಇಡೀ ಬಾಲಿವುಡ್ ಸಂಭ್ರಮಿಸಿತು. ಕರಣ್ ಜೋಹಾರ್ ಸೇರಿದಂತೆ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಜೋಡಿಯನ್ನು ಇಷ್ಟ […]

Advertisement

Wordpress Social Share Plugin powered by Ultimatelysocial