ಜ್ಞಾನ್ವಾಪಿ ಮಸೀದಿಯ ಸಮೀಕ್ಷೆಯನ್ನು ತಕ್ಷಣವೇ ತಡೆಹಿಡಿಯಬೇಕೆಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನವದೆಹಲಿ: ಜ್ಞಾನ್ವಾಪಿ ಮಸೀದಿಯ ಸಮೀಕ್ಷೆಯನ್ನು ತಕ್ಷಣವೇ ತಡೆಹಿಡಿಯಬೇಕೆಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆದಾಗ್ಯೂ, ಸುಪ್ರೀಂ ಕೋರ್ಟ್ ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.

ಅಂಜುಮನ್ ಸಮನ್ ಸಖಾರಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ‘ಈ ವಿಷಯದಲ್ಲಿ ನಮಗೆ ಯಾವುದೇ ಮಾಹಿತಿ ಇಲ್ಲ. ಇಂಥಹ ಪರಿಸ್ಥಿತಿಯಲ್ಲಿ, ನಾವು ತಕ್ಷಣವೇ ಆದೇಶವನ್ನು ಹೇಗೆ ಹೊರಡಿಸಬಹುದು?

ನಾವು ಈ ಪ್ರಕರಣವನ್ನು ಪಟ್ಟಿ ಮಾಡಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ನಾವು ಓದಿಲ್ಲ ಎಂದು ಮುಖ್ಯ ನ್ಯಾಯಾಧೀಶರು ಹೇಳಿದರು. ಅವರ ಅಧ್ಯಯನದ ನಂತರವೇ ಆದೇಶವನ್ನು ಹೊರಡಿಸಬಹುದು ಅಂತ ಹೇಳಿದ್ದಾರೆ. ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯೊಳಗೆ ಸಮೀಕ್ಷೆ ಮುಂದುವರಿಯಲಿದೆ ಮತ್ತು ಮೇ 17 ರೊಳಗೆ ವರದಿಯನ್ನು ಸಲ್ಲಿಸಬೇಕಾಗಿದೆ ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಹೇಳಿದೆ. ವಾರಣಾಸಿಯ ನ್ಯಾಯಾಲಯವು ಇಬ್ಬರು ವಕೀಲರನ್ನು ಸಮೀಕ್ಷಾ ಆಯೋಗಕ್ಕೆ ಸೇರಿಸಿದೆ.

ಮಸೀದಿಯ ಆವರಣದಲ್ಲಿರುವ ಎರಡು ನೆಲಮಾಳಿಗೆಗಳನ್ನು ವೀಡಿಯೊಗ್ರಫಿಗಾಗಿ ತೆರೆಯುವ ವಿಷಯದ ಬಗ್ಗೆ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ರವಿ ಕುಮಾರ್ ದಿವಾಕರ್ ಅವರ ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಈ ತೀರ್ಪನ್ನು ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 19ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ

Fri May 13 , 2022
  ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ನಿರೀಕ್ಷೆಗಿಂತ ಕೊಂಚ ತಡವಾಗಿದ್ದು, ಮೇ 19ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶ ಮೇ 15ರೊಳಗೆ ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೆ ಮೌಲ್ಯಮಾಪನದಲ್ಲಿನ ಸಣ್ಣಪುಟ್ಟ ದೋಷ ಸರಿಪಡಿಸುವುದು, ಅಂಕದಾಖಲೀಕರಣ ಸೇರಿದಂತೆ ಕೊಂಚ ತಡವಾಗಿದ್ದು, ಮೇ.19ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪೌಢ […]

Advertisement

Wordpress Social Share Plugin powered by Ultimatelysocial