ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಆಶಿಷ್‌ ಮಿಶ್ರಾ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್!

ನವದೆಹಲಿ, ಏಪ್ರಿಲ್ 18; ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಆಶಿಷ್‌ ಮಿಶ್ರಾ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಫೆಬ್ರವರಿಯಲ್ಲಿ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು.

ಸೋಮವಾರ ಸುಪ್ರೀಂಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ.

ಕೇಂದ್ರ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಷ್‌ ಮಿಶ್ರಾ ಲಖೀಂಪುರ ಖೇರಿ ಗಲಭೆ ಪ್ರಕರಣದ ಆರೋಪಿ.

ಆಶಿಷ್‌ ಮಿಶ್ರಾಗೆ ಜಾಮೀನು ನೀಡಿರುವುದನ್ನು ಲಖೀಂಪುರ ಖೇರಿ ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು.

2021ರ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಗಲಭೆ ನಡೆದಿತ್ತು. ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹತ್ತಿಸಲಾಗಿತ್ತು. ಆಶಿಷ್‌ ಮಿಶ್ರಾ ಈ ಪ್ರಕರಣದಲ್ಲಿ ಆರೋಪಿ.

2022ರ ಫೆಬ್ರವರಿ 10ರಂದು ಅಲಹಾಬಾದ್ ಹೈಕೋರ್ಟ್ ಆಶಿಷ್‌ ಮಿಶ್ರಾಗೆ ಜಾಮೀನು ನೀಡಿತ್ತು. ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿದ್ದರು.

ಸೋಮವಾರ ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ಹೈಕೋರ್ಟ್ ಅನಗತ್ಯ ಅಂಶಗಳನ್ನು ಪರಿಗಣಿಸಿದೆ ಎಂದು ಹೇಳಿದೆ ಮತ್ತು ಆಶಿಷ್ ಮಿಶ್ರಾ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ !

Mon Apr 18 , 2022
ಮಂಗಳೂರು: ಎಸ್‌ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಸೇರಿ ಐವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮಿರಾಜುಲ್​ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬ್‌ಉಲ್ಲಾ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥ […]

Advertisement

Wordpress Social Share Plugin powered by Ultimatelysocial