ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ !

 

ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ.

ನಗರದ ಮಿಥುನ್ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ.

ಆತ ಇಂದು ಗಣಿತ ಪರೀಕ್ಷೆ ಬರೆಯಬೇಕಾಗಿತ್ತು.

ಶುಕ್ರವಾರ ರಾತ್ರಿ ಮನೆಯ ಟೆರಸ್ ಮೇಲೆ ಓದುತ್ತಿದ್ದನು. 11.30ರ ಸಮಯದಲ್ಲಿ ಮಗ ಓದುತ್ತಿರುವುದನ್ನು ನೋಡಿ ಪೋಷಕರು ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮಿಥುನ್ ಟೆರಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ಶ್ವಾನದಳದೊಂದಿಗೆ ಪೋಲೀಸರು ತನಿಖೆ ಶುರು ಮಾಡಿದ್ದಾರೆ.

ಮೃತ ಮಿಥುನ್, ಸತೀಶ್ ಪಿಸಾಳೆ ದಂಪತಿಯ ಏಕೈಕ ಪುತ್ರನಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿರುವ ಮಗನ ಶವ ಕಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜೀವ್ ಕುಮಾರ್ ಅವರ ಅಧಿಕಾರಾವಧಿ ಎಪ್ರಿಲ್ 30ಕ್ಕೆ ಕೊನೆಗೊಳ್ಳಲಿದೆ.!

Sat Apr 23 , 2022
  ಹೊಸದಿಲ್ಲಿ: ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್ ಕುಮಾರ್ ಹಠಾತ್ ರಾಜೀನಾಮೆ ನೀಡಿದ್ದು, ಸರಕಾರವು ಶುಕ್ರವಾರ ಸುಮನ್ ಕೆ. ಬೆರಿ ಅವರನ್ನು ನೀತಿ ಆಯೋಗದ ನೂತನ ಉಪಾಧ್ಯಕ್ಷರನ್ನಾಗಿ ನೇಮಿಸಿದೆ. ಬೆರಿ ಅವರು ಮೇ 1, 2022 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತ ಆದೇಶ ತಿಳಿಸಿದೆ. ರಾಜೀವ್ ಕುಮಾರ್ ಅವರ ಅಧಿಕಾರಾವಧಿ ಎಪ್ರಿಲ್ 30ಕ್ಕೆ ಕೊನೆಗೊಳ್ಳಲಿದೆ. ಖ್ಯಾತ ಅರ್ಥಶಾಸ್ತ್ರಜ್ಞರಾದ ಕುಮಾರ್ ಅವರು ಆಗಸ್ಟ್ 2017 ರಲ್ಲಿ ನೀತಿ ಆಯೋಗದ […]

Advertisement

Wordpress Social Share Plugin powered by Ultimatelysocial