ಪಿಎಸ್‍ಐ ಪರೀಕ್ಷಾ ಕೇಂದ್ರದಲ್ಲಿ ಭದ್ರತಾ ಲೋಪವೆಸಗಿದ್ದ ಕಲಬುರಗಿಯ 13 ಪೊಲೀಸರ ಅಮಾನತು

ಬೆಂಗಳೂರು, ಮೇ 7- ಪಿಎಸ್‍ಐ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎನ್ನಲಾಗಿರುವ ಕಲಬುರಗಿ ನಗರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 13 ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯಲೋಪದಡಿ ಒಬ್ಬರು ಸಬ್ ಇನ್ಸ್‍ಪೆಕ್ಟರ್ ಹಾಗೂ ಇಬ್ಬರು ಹೆಡ್ ಕಾನ್ಸ್‍ಸ್ಟೆಬಲ್‍ಗಳು ಸೇರಿ 13 ಪೊಲೀಸರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ.

ಕಲಬುರಗಿಯ ಜ್ಞಾನಜ್ಯೋತಿ ಶಾಲೆ ಮತ್ತು ಎಂಎಸ್ ಇರಾನಿ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳ 13 ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಕರ್ತವ್ಯಲೋಪದಡಿ ಅಮಾನತುಗೊಳಿಸಲಾಗಿದೆ.

ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಸುದ್ದಿ ಹೊರಬರುತ್ತಿದ್ದಂತೆ ಸಿಐಡಿ ಪೊಲೀಸರು ಅಂದಿನಿಂದಲೂ ವಿವಿಧ ಹಂತಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರತಿ ದಿನ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

ಇದೀಗ ಕಲಬುರಗಿ ನಗರದ 13 ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸುವ ಮೂಲಕ ಪೊಲೀಸರಿಗೂ ಬಿಸಿ ಮುಟ್ಟಿಸಿದಂತಾಗಿದೆ.
ಸಿಐಡಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಇನ್ನಷ್ಟು ಮಂದಿ ಪೊಲೀಸ್ ಅಧಿಕಾರಿ ಗಳು ಮತ್ತು ಸಿಬ್ಬಂದಿಗಳು ಅಮಾನತುಗೊಳ್ಳುವ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾನು ತಗ್ಗೋ ಮಗನೇ ಅಲ್ಲ: ಯತ್ನಾಳ್‌ ತಿರುಗೇಟು!

Sat May 7 , 2022
  ನನ್ನನ್ನು ಪಕ್ಷದಿಂದ ಹೊರಗೆ ಹಾಕಿಬಿಡ್ತಾರೆ, ಶಿಸ್ತು ಕ್ರಮ ಕೈಗೊಳ್ತಾರೆ ಅಂತ ಯಾರೂ ಖುಷಿಪಡಬೇಡಿ. ಅದು ಯಾವುದೂ ಆಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಮಾತನಾಡಿದ್ದೇನೆ. ಸತ್ಯ ಯಾವಾಗಿತ್ತಿದ್ದರೂ ಚಿನ್ನ ಇದ್ದಂತೆ. ಸುಳ್ಳು ಹೇಳಿಲ್ಲ ನಾನು ಎಂದು ಸಿಎಂ ಸ್ಥಾನಕ್ಕೆ 2500 ಕೋಟಿ ಆಫರ್‌ ಮಾಡಿದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಟೀವಿ ಚಾನೆಲ್‌ ಗಳಲ್ಲಿ ಕುಳಿತು. […]

Advertisement

Wordpress Social Share Plugin powered by Ultimatelysocial