ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಜ. 12 ರಂದು ಹಮ್ಮಿಕೊಳ್ಳಲಾದ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು,

ಇದು ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ, ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಜನೆವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26 ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರೀ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇಂದು ಇಲ್ಲಿನ ರೈಲ್ವೆ ಮೈದಾನದಲ್ಲಿ ಚುರುಕಿನ ಸಿದ್ಧತೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ಮಾಡಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮಕ್ಕೆ ಸುಮಾರು 25-30 ಸಾವಿರ ಯುವಕರು ಭಾಗಿಯಾಗಲಿದ್ದು, ದೇಶದ ವಿವಿಧ ರಾಜ್ಯಗಳಿಂದ 8 ಸಾವಿರ ಯುವಕರು ಆಗಮಿಸಲಿದ್ದಾರೆ. ಅವರಿಗೆ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಹುಬ್ಬಳ್ಳಿಯಲ್ಲಿ 2018 ರ ನಂತರದ ಮೋದಿಯವರ ಬೃಹತ್ ಕಾರ್ಯಕ್ರಮ ಇದಾಗಿದೆ ಎಂದರು.

ಇನ್ನು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಕೇಂದ್ರದ ಕಾರ್ಯಕ್ರಮ ಆಗಿದ್ದು ಇದಕ್ಕೆ ರಾಜ್ಯ ಸರ್ಕಾರ ಸಹಕಾರದೊಂದಿಗೆ ನಡೆಯುತ್ತಿದೆ. ಈಗಾಗಲೇ ಸಿದ್ದತೆ ಭರದಿಂದ ನಡೆದಿದ್ದು, ಜಿಲ್ಲಾಡಳಿತ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯಕ್ರಮವು ಶಾಂತ ರೀತಿಯಿಂದ ಜರುಗಬೇಕು ಎಂದರು.

ಕಾಂಗ್ರೆಸ್ ಗೋ ಬ್ಯಾಕ್ ಅಭಿಯಾನಕ್ಕೆ ಅರ್ಥವಿಲ್ಲ: ಪ್ರಧಾನಿ ನರೇಂದ್ರ ಮೋದಿ ಅವರು ಹು-ಧಾಕ್ಕೆ ಬರುತ್ತಿರುವ ಹಿನ್ನೆಲೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಗೋ-ಬ್ಯಾಕ್ ಮೋದಿ ಅಭಿಯಾನ ಆರಂಭಿಸಿದಕ್ಕೆ ಯಾವುದೇ ಅರ್ಥವಿಲ್ಲ, ಮುಂದಿನ 2-3 ತಿಂಗಳಲ್ಲಿ ಚುನಾವಣೆ ಬರುವ ಹಿನ್ನೆಲೆಯಲ್ಲಿ ಅವರಿಗೆ ಮಾಡಲು ಏನೂ ಕೆಲಸವಿಲ್ಲದೇ ಈ ರೀತಿಯಾಗಿ ಅಪಪ್ರಚಾರ ಮಾಡತ್ತಾರೆ ಎಂದು ಕಿಡಿಕಾರಿದರು.

ಅವಳಿನಗರದ ನೀರಿನ ಸಮಸ್ಯೆಗೆ 10 ದಿನಗಳಲ್ಲಿ ಪರಿಹಾರ: ಹು-ಧಾ ಅವಳಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಅಧಿವೇಶನದಲ್ಲಿ ಧ್ವನಿ ಎತ್ತಿದ್ದೇನೆ. ಅಲ್ಲದೇ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಗರಾಭಿವೃದ್ಧಿ ಸಚಿವರು ಸ್ಪಂದಿಸಿದ್ದು ಪ್ರಧಾನಿಗಳ ಹುಬ್ಬಳ್ಳಿ ಕಾರ್ಯಕ್ರಮದ ನಂತರ ನಗರದಲ್ಲಿ ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಮುಂದಾಗೋಣಾ ಎಂದು ತಿಳಿಸಿದ್ದಾರೆ. ಅದರಂತೆ ಚರ್ಚೆ ಮಾಡಿ ಮತ್ತೆ ಮುಂದಿನ ಕ್ರಮ ಕೈಗೊಳ್ಳಲು ತಿರ್ಮಾಣ ಮಾಡಲಾಗುವುದು ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ಶಾಲೆ ಶತಮಾನೋತ್ಸವ

Sun Jan 8 , 2023
ತೆವರಮಳ್ಳಹಳ್ಳಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೀಘ್ರವೇ ನಾಲ್ಕು ಹೊಸ ಕೊಠಡಿ ನಿರ್ಮಾಣ ಮಾಡಲು ಆದೇಶ ನೀಡಲಾಗುವುದು. ಶಾಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ 15 ದಿನದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ಸಚಿವ ನಾಗೇಶ್ ಅವರು ಮಕ್ಕಳ ಹಂತಕ್ಕೆ ಹೋಗಿ ಗ್ರಾಮೀಣ ಪ್ರದೇಶದ ಎಲ್ಲ […]

Advertisement

Wordpress Social Share Plugin powered by Ultimatelysocial