ಸ್ವಾಮಿ ವಿವೇಕಾನಂದರ ದಿವ್ಯ ವಾಣಿ

ವಿಶ್ವಮಾನವ, ವಿಶ್ವವಿಜೇತ, ವೀರಸಂನ್ಯಾಸಿ ಸ್ವಾಮಿ ವಿವೇಕಾನಂದರು 1863ರ ಜನವರಿ 12ರಂದು, ಇದೇ ನಾವು ಹುಟ್ಟಿರುವ ಈ ಪುಣ್ಯಭೂಮಿಯಾದ ಭರತಭೂಮಿಯಲ್ಲಿ ಜನಿಸಿದರು.
ನಮ್ಮ ಭರತ ಭೂಮಿಯಲ್ಲಿ ಅಂತದ್ದೇನಿದೆ ಎಂಬುದನ್ನು ಸ್ವಾಮಿ ವಿವೇಕಾನಂದರ ಮಾತುಗಳಲ್ಲೇ ಅರಿಯುವುದು ಶ್ರೇಷ್ಠವಾದುದು. ಅವರು ನುಡಿಯುತ್ತಾರೆ “ಜಗತ್ತಿನಲ್ಲಿ ಯಾವುದಾದರೂ ಒಂದು ದೇಶವು ಪುಣ್ಯಭೂಮಿಯೆಂದು ಕರೆಯಿಸಿಕೊಳ್ಳಲು ಅರ್ಹವಾಗಿದ್ದರೆ, ಜೀವಿಗಳು ತಮ್ಮ ಬಾಳಿನ ಕೊನೆಯ ಕರ್ಮವನ್ನು ಸವೆಸಲು ಬರಬೇಕಾದ ಸ್ಥಳವೊಂದಿದ್ದರೆ, ಭಗವಂತನೆಡೆಗೆ ಸಂಚರಿಸುತ್ತಿರುವ ಪ್ರತಿಯೊಬ್ಬ ಜೀವಿಯೂ ತನ್ನ ಕೊನೆಯ ಯಾತ್ರೆಯನ್ನು ಪೂರೈಸುವುದಕ್ಕೆ ಒಂದು ಕರ್ಮಭೂಮಿಗೆ ಬರಬೇಕಾಗಿದ್ದರೆ, ಯಾವುದಾದರೂ ದೇಶದಲ್ಲಿ ಮಾನವ ಕೋಟಿಯ ಮಾಧುರ್ಯ, ಔದಾರ್ಯ, ಪಾವಿತ್ರ್ಯ, ಶಾಂತಿ – ಇವುಗಳಲ್ಲಿ ಎಲ್ಲಕ್ಕಿಂತ ಹೆಚ್ಚಾಗಿ ಧ್ಯಾನದಲ್ಲಿ ಮತ್ತು ಅಂತರ್ಮುಖ ಜೀವನದಲ್ಲಿ ತನ್ನ ಪರಾಕಾಷ್ಠೆಯನ್ನು ಮುಟ್ಟಿದ್ದರೆ ಅದು ಭರತಖಂಡವೇ ಆಗಿದೆ.” ಇಂಥ ಅದಮ್ಯ ನಂಬಿಕೆಯನ್ನು ತಮ್ಮಲ್ಲಿ ತುಂಬಿಕೊಂಡಿದ್ದ ಸ್ವಾಮೀಜಿಯವರು ತಮ್ಮ ಬದುಕಿನ ಮೂಲಕ ಅದನ್ನು ವಿಶ್ವಕ್ಕೆಲ್ಲಾ ಸಾಬೀತು ಮಾಡಿಕೊಟ್ಟರು.ಸ್ವಾಮಿ ವಿವೇಕಾನಂದರ ಬಗ್ಗೆ ಈ ದೇಶದ ಮಹಿಮಾನ್ವಿತರ ಮಾತುಗಳು ಹೀಗಿವೆ.
“ನೀವು ಭಾರತವನ್ನು ಅರಿಯಬೇಕೆಂದಿದ್ದರೆ ಸ್ವಾಮಿ ವಿವೇಕಾನಂದರನ್ನು ಅಧ್ಯಯನ ಮಾಡಿ. ಅವರಲ್ಲಿ ಎಲ್ಲವೂ ರಚನಾತ್ಮಕವಾದುದು. ನೇತ್ಯಾತ್ಮಕವಾದುದು ಯಾವುದೂ ಇಲ್ಲ” – ರವೀಂದ್ರನಾಥ ಠಾಕೂರ್
“ನಾನು ಸ್ವಾಮೀಜಿಯವರ ಕೃತಿಗಳನ್ನು ಅಮೂಲಾಗ್ರವಾಗಿ ಓದಿದ್ದೇನೆ. ಅವುಗಳ ಅಧ್ಯಯನದ ನಂತರ ಭಾರತದ ಬಗೆಗಿದ್ದ ನನ್ನ ಪ್ರೀತಿ ಸಾವಿರ ಪಾಲು ಹೆಚ್ಚಿತು” – ಮಹಾತ್ಮ ಗಾಂಧಿ
“ಸ್ವಾಮೀಜಿಯವರ ನುಡಿಗಳಿಂದ ನಮ್ಮ ದೇಶದ ಜನ ಹಿಂದೆಂದೂ ಕಾಣದ ಆತ್ಮ ಗೌರವವನ್ನೂ, ಆತ್ಮವಿಶ್ವಾಸವನ್ನೂ ಹಾಗೂ ಆತ್ಮಬಲವನ್ನೂ ಪಡೆದಿದ್ದಾರೆ” – ಸುಭಾಷ್ ಚಂದ್ರಬೋಸ್
“ಸ್ವಾಮಿ ವಿವೇಕಾನಂದರು ಸ್ವಾಭಾವಿಕವಾಗಿ ಅದ್ಭುತ ಪ್ರತಿಭಾಸಂಪನ್ನರು. ಅವರ ಬುದ್ಧಿ ವಿದ್ಯುದ್ವೇಗದಿಂದ ಸಂಚಾರ ಮಾಡತಕ್ಕದ್ದು; ಅದು ಒಮ್ಮೆ ಲೀಲೆಯಿಂದ ಸಮುದ್ರ ತಳಕ್ಕೆ ಧುಮುಕುವುದು; ಇನ್ನೊಮ್ಮೆ ಪಕ್ಷಿಯಂತೆ ಗಿರಿಶಿಖರಕ್ಕೆ ಹಾರುವುದು; ಮತ್ತೊಮ್ಮೆ ಹುಲ್ಲುಗಾವಲಿನ ಮೇಲೆ ಮಂದಮಾರುತದಂತೆ ಸುಳಿದಾಡುವುದು. ಒಂದು ತೀಕ್ಷ್ಣತೆ, ಒಂದು ಲಘುತೆ, ಒಂದು ಆವೇಶ, ಒಂದು ವಿಳಾಸ – ಇವು ಆ ಬುದ್ಧಿಯ ಗುಣಗಳು. ಅವರು ಸಂಸ್ಕೃತದಲ್ಲಿ ವ್ಯಾಕರಣ ತರ್ಕಶಾಸ್ತ್ರಗಳನ್ನು ಸಾಂಗವಾಗಿ ಅಭ್ಯಾಸ ಮಾಡಿದ್ದರು. ಹಾಗೆಯೇ ಇಂಗ್ಲಿಷಿನಲ್ಲಿ ಕಾವ್ಯ ಇತಿಹಾಸಗಳನ್ನೂ ವಿಜ್ಞಾನಶಾಸ್ತ್ರ ತತ್ವಮೀಮಾಂಸೆಗಳನ್ನೂ ವಿಸ್ತಾರವಾಗಿ ಪರಾಮರ್ಶಿಸಿ ಸ್ವಾಧೀನಪಡಿಸಿಕೊಂಡಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬ್ಯಾರಿಕೇಡ್ ಹಾರಿ ಪ್ರಧಾನಿಗಳತ್ತ ನುಗ್ಗಿದ ಬಾಲಕ.

Fri Jan 13 , 2023
ಹುಬ್ಬಳ್ಳಿ ಜನವರಿ 13: ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದರು. ಬಿಗಿ ಪೊಲೀಸ್‌ ಬಂದೋಬಸ್ತ್‌ ನಡುವೆಯೇ ಬಾಲಕನೊಬ್ಬ ಬ್ಯಾರಿಕೇಡ್ ದಾಟಿ ಪ್ರಧಾನ ಮಂತ್ರಿಗೆ ಹೂವಿನ ಹಾರ ಹಾಕಲು ಓಡಿ ಬಂದ ಘಟನೆ ನಡೆದಿದೆ. ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರಮಣ್ ಗುಪ್ತಾ ಮಾತನಾಡಿದ್ದು, ಪ್ರಧಾನಿಗಳಿಗೆ ಭದ್ರತಾ ಲೋಪವಾಗಿಗೆ ಎನ್ನುವ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರೋಡ್ ಶೋ ವೇಳೆ […]

Advertisement

Wordpress Social Share Plugin powered by Ultimatelysocial